ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ನಿಲ್ಲಿಸುವಂತೆ ಧವನ್, ರಾಹುಲ್ ಕರೆ

Last Updated 17 ಸೆಪ್ಟೆಂಬರ್ 2022, 2:48 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ತಕ್ಷಣ ನಿಲ್ಲಿಸುವಂತೆ ಕ್ರಿಕೆಟಿಗರಾದ ಶಿಖರ್ ಧವನ್ ಮತ್ತು ಕೆ.ಎಲ್. ರಾಹುಲ್ ಕಳಕಳಿಯಿಂದ ವಿನಂತಿ ಮಾಡಿದ್ದಾರೆ.

ಕೇರಳದಾದ್ಯಂತ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಉಪಟಳ ವಿಪರೀತವಾಗಿರುವ ಹಿನ್ನೆಲೆಯಲ್ಲಿ ಶ್ವಾನಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಧವನ್, ಕೇರಳದಲ್ಲಿ ಬೀದಿ ನಾಯಿಗಳ ಸಾಮೂಹಿಕ ಹತ್ಯೆ ನಡೆಯುತ್ತಿರುವುದು ತುಂಬಾ ಭಯಾನಕ ವಿಚಾರವಾಗಿದೆ. ಈ ಕ್ರೂರ ಹತ್ಯೆ ಕೊನೆಗೊಳಿಸಲು ಮತ್ತು ಅಂತಹ ನಿರ್ಧಾರವನ್ನು ಜನರು ಮರುಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕನ್ನಡಿಗ ಕೆ.ಎಲ್. ರಾಹುಲ್ ಸಹ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಸ್‌ನಲ್ಲಿ ಬೀದಿ ನಾಯಿಗಳ ರಕ್ಷಣೆಗೆ ಕರೆ ನೀಡಿದ್ದಾರೆ.

ಕೇರಳದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆ ಮತ್ತೆ ಆರಂಭವಾಗಿದ್ದು, ದಯವಿಟ್ಟು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಬೀದಿ ನಾಯಿಗಳ ರಕ್ಷಣೆಗಾಗಿ ಬೆಂಗಳೂರು ಮೂಲದ ವಿಒಎಸ್‌ಡಿ ಸಂಘಟನೆಯನ್ನು ಉಲ್ಲೇಖಿಸಿದ್ದಾರೆ.

ಕೆ.ಎಲ್. ರಾಹುಲ್ ಮನವಿ
ಕೆ.ಎಲ್. ರಾಹುಲ್ ಮನವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT