ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ICC ODI Rankings: ಟಾಪ್ 5 ಪಟ್ಟಿಗೆ ಲಗ್ಗೆಯಿಟ್ಟ ಕಿಂಗ್ ಕೊಹ್ಲಿ

Last Updated 18 ಜನವರಿ 2023, 11:36 IST
ಅಕ್ಷರ ಗಾತ್ರ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಗ್ರ ಐದರ ಪಟ್ಟಿಗೆ ಲಗ್ಗೆಯಿಟ್ಟಿದ್ದಾರೆ.

ಅತ್ತ ಏಕದಿನ ಬೌಲಿಂಗ್ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 15 ಸ್ಥಾನಗಳ ಬಡ್ತಿ ಪಡೆದು, ಟಾಪ್ 5ರಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಎರಡು ಶತಕ ಸಾಧನೆ ಮಾಡಿರುವ ಕೊಹ್ಲಿ, ಎರಡು ಸ್ಥಾನಗಳ ಬಡ್ತಿ ಪಡೆದು ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ. ಈ ವಿಭಾಗವನ್ನು ಪಾಕಿಸ್ತಾನದ ನಾಯಕ ಬಾಬರ್ ಆಜಂ ಮುನ್ನಡೆಸುತ್ತಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಸಿರಾಜ್, 685 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಲಂಕಾ ವಿರುದ್ಧದ ಸರಣಿಯಲ್ಲಿ ಸಿರಾಜ್ ಒಟ್ಟು 9 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ವಿಭಾಗದಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿದ್ದಾರೆ.

ಭಾರತೀಯ ಬ್ಯಾಟರ್ ಶುಭಮನ್ ಗಿಲ್ 10 ಸ್ಥಾನಗಳ ಬಡ್ತಿ ಪಡೆದು 26ಕ್ಕೆ ತಲುಪಿದ್ದಾರೆ. ಲಂಕಾ ಸರಣಿಯಲ್ಲಿ ಗಿಲ್ 69ರ ಸರಾಸರಿಯಲ್ಲಿ 207 ರನ್ ಗಳಿಸಿದ್ದರು.

ಕುಲದೀಪ್ ಯಾದವ್, ಏಳು ಸ್ಥಾನಗಳ ಮುನ್ನಡೆ ಗಳಿಸಿ, 21ಕ್ಕೆ ತಲುಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT