ಏಕದಿನ ರ‍್ಯಾಂಕಿಂಗ್‌: ಕೊಹ್ಲಿ, ಬೂಮ್ರಾ ಸ್ಥಾನ ಅಬಾಧಿತ

7

ಏಕದಿನ ರ‍್ಯಾಂಕಿಂಗ್‌: ಕೊಹ್ಲಿ, ಬೂಮ್ರಾ ಸ್ಥಾನ ಅಬಾಧಿತ

Published:
Updated:
Deccan Herald

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್‌ ಜಸ್‌ಪ್ರೀತ್ ಬೂಮ್ರಾ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್‌ ವಿಭಾಗದ ಅಗ್ರ ಸ್ಥಾನ ಉಳಿಸಿಕೊಂಡಿದ್ದಾರೆ.

ಮಂಗಳವಾರ ಬಿಡುಗಡೆಯಾಗಿರುವ ರ‍್ಯಾಂಕಿಂಗ್ ಪಟ್ಟಿಯ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ರೋಹಿತ್ ಶರ್ಮಾ ಎರಡನೇ ಸ್ಥಾನ ಗಳಿಸಿದ್ದಾರೆ. ಅವರ ಆರಂಭಿಕ ಜೋಡಿ ಶಿಖರ್ ಧವನ್ ಎಂಟನೇ ಸ್ಥಾನದಲ್ಲಿದ್ದಾರೆ. ಕಳೆದ ಬಾರಿ ಅವರು ಒಂಬತ್ತನೇ ಸ್ಥಾನದಲ್ಲಿದ್ದರು. ಮಹೇಂದ್ರ ಸಿಂಗ್ ಧೋನಿ 20ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಬೌಲರ್‌ಗಳ ಪಟ್ಟಿಯ ಅಗ್ರ ಹತ್ತರಲ್ಲಿ ಮೂವರು ಬೌಲರ್‌ಗಳು ಸ್ಥಾನ ಗಳಿಸಿದ್ದಾರೆ. ಬೂಮ್ರಾ 841 ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದರೆ, ಕುಲದೀಪ್ ಯಾದವ್‌ ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಯಜುವೇಂದ್ರ ಚಾಹಲ್‌ ಮೂರು ಸ್ಥಾನಗಳ ಏರಿಕೆಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಫ್ವಾನಿಸ್ತಾನದ ರಶೀದ್ ಖಾನ್‌ 353 ಪಾಯಿಂಟ್‌ಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದಾರೆ. ತಂಡಗಳ ವಿಭಾಗದಲ್ಲಿ ಇಂಗ್ಲೆಂಡ್‌ (126 ಪಾಯಿಂಟ್‌) ಮೊದಲ ಸ್ಥಾನದಲ್ಲಿದ್ದು ಭಾರತ (121) ಎರಡನೇ ಸ್ಥಾನದಲ್ಲಿದೆ.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !