ಬುಧವಾರ, ಏಪ್ರಿಲ್ 8, 2020
19 °C

ರ‍್ಯಾಂಕಿಂಗ್‌: ಅಗ್ರಪಟ್ಟ ಉಳಿಸಿಕೊಂಡ ಕೊಹ್ಲಿ, ಬೂಮ್ರಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಜಸ್‌ಪ್ರೀತ್‌ ಬೂಮ್ರಾ ಅವರು ಮಂಗಳವಾರ ಐಸಿಸಿ ಪ್ರಕಟಿಸಿರುವ ಏಕದಿನ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಕ್ರಮವಾಗಿ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ಗಳ ವಿಭಾಗಗಳಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ವಿರಾಟ್‌ ಅವರು ಒಟ್ಟು 895 ಪಾಯಿಂಟ್ಸ್‌ ಗಳಿಸಿದ್ದಾರೆ. ಭಾರತ ತಂಡದ ಉಪ ನಾಯಕ ರೋಹಿತ್‌ ಶರ್ಮಾ (863 ಪಾಯಿಂಟ್ಸ್‌) ಎರಡನೇ ಸ್ಥಾನದಲ್ಲಿದ್ದಾರೆ.

ಬಲಗೈ ವೇಗದ ಬೌಲರ್‌ ಬೂಮ್ರಾ, ಗಾಯದ ಕಾರಣ ಹಿಂದಿನ ಕೆಲ ಸರಣಿಗಳಲ್ಲಿ ಆಡಿರಲಿಲ್ಲ. ಹೀಗಿದ್ದರೂ ಅವರ ರ‍್ಯಾಂಕಿಂಗ್‌ ಪಾಯಿಂಟ್ಸ್‌ (797) ಕಡಿಮೆಯಾಗಿಲ್ಲ. ನ್ಯೂಜಿಲೆಂಡ್‌ನ ಟ್ರೆಂಟ್‌ ಬೌಲ್ಟ್‌ (740) ಎರಡನೇ ಸ್ಥಾನದಲ್ಲಿದ್ದಾರೆ.  

ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಹಾರ್ದಿಕ್‌ ಪಾಂಡ್ಯ ಹತ್ತನೇ ಸ್ಥಾನ ಪಡೆದಿದ್ದಾರೆ. ಅವರ ಖಾತೆಯಲ್ಲಿ 246 ಪಾಯಿಂಟ್ಸ್‌ ಇವೆ. ಇಂಗ್ಲೆಂಡ್‌ನ ಬೆನ್‌ ಸ್ಟೋಕ್ಸ್‌ (319) ಅಗ್ರಸ್ಥಾನದಲ್ಲಿದ್ದು, ಅಫ್ಗಾನಿಸ್ತಾನದ ಮೊಹಮ್ಮದ್‌ ನಬಿ (307) ನಂತರದ ಸ್ಥಾನ ಹೊಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು