ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG: 3, 4ನೇ ಟೆಸ್ಟ್ ಪಂದ್ಯಕ್ಕೂ ಕೊಹ್ಲಿ ಅನುಮಾನ

Published 7 ಫೆಬ್ರುವರಿ 2024, 16:31 IST
Last Updated 7 ಫೆಬ್ರುವರಿ 2024, 16:31 IST
ಅಕ್ಷರ ಗಾತ್ರ

ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ವೈಯಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಬುಧವಾರ ಬಿಸಿಸಿಐ ಮೂಲಗಳು ತಿಳಿಸಿವೆ. ಇದೇ ಕಾರಣಕ್ಕೆ ಅವರು ಮೊದಲೆರಡು ಪಂದ್ಯಗಳಲ್ಲಿಯೂ ಆಡಿರಲಿಲ್ಲ.

ಧರ್ಮಶಾಲಾದಲ್ಲಿ(ಮಾರ್ಚ್ 7–11) ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಕೊಹ್ಲಿ ಆಡುವ ಸಾಧ್ಯತೆ ಕಡಿಮೆ ಇದೆ. ಆದರೆ, ಆ ಪಂದ್ಯಕ್ಕಿನ್ನೂ ಒಂದು ತಿಂಗಳ ಕಾಲಾವಕಾಶ ಇರುವುದರಿಂದ ಆ ಬಗ್ಗೆ ಚಿಂತಿಸಿಲ್ಲ ಎಂದು ಮೂಲಗಳು ಹೇಳಿವೆ.

ಮೂರನೇ ಟೆಸ್ಟ್ ಪಂದ್ಯವು ಫೆ 15ರಿಂದ 19ರವರೆಗೆ ರಾಜಕೋಟ್‌ನಲ್ಲಿ ನಡೆಯಲಿದ್ದು, ನಾಲ್ಕನೇ ಪಂದ್ಯ ಫೆ 23ರಿಂಸ 27ರವರೆಗೆ ರಾಂಚಿಯಲ್ಲಿ ನಡೆಯಲಿದೆ.

ವಿರಾಟ್ ಕೊಹ್ಲಿ ಟೆಸ್ಟ್ ಸರಣಿಯಲ್ಲಿ ಆಡುವ ಕುರಿತಂತೆ ಸ್ಪಷ್ಟನೆ ಸಿಕ್ಕಿಲ್ಲ. ಅವರ ಲಭ್ಯತೆ ಆಧರಿಸಿ ಸರಣಿಗೆ ಸೇರಿಸಿಕೊಳ್ಳಲಾಗುವುದು ಎಂದು ಮೂಲಗಳನ್ನು ಉದ್ದೇಶಿಸಿ ಫೆ.3ರಂದು ಬಿಸಿಸಿಐ ವರದಿ ಮಾಡಿತ್ತು.

ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ, ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಅವರ ಆಪ್ತ ಗೆಳೆಯ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಬಹಿರಂಗಪಡಿಸಿದ್ದರು.

ಸದ್ಯ, ಐದು ಪಂದ್ಯಗಳ ಸರಣಿಯಲ್ಲಿ 1–1ರಿಂದ ಸಮಬಲ ಸಾಧಿಸಿರುವ ಭಾರತ ತಂಡ ಮೂರನೇ ಪಂದ್ಯ ಗೆದ್ದು ಸರಣಿಯಲ್ಲಿ ಮುನ್ನಡೆ ಪಡೆದುಕೊಳ್ಳುವ ತವಕದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT