ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಟ್ ಕೊಹ್ಲಿಗೆ ವಿಸ್ಡನ್‌ ಅಲ್‌ಮನ್ಯಾಕ್ ಗೌರವ

Last Updated 15 ಏಪ್ರಿಲ್ 2021, 10:03 IST
ಅಕ್ಷರ ಗಾತ್ರ

ಲಂಡನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ವಿಸ್ಡನ್ ಅಲ್‌ಮನ್ಯಾಕ್ ದಶಕದ ಏಕದಿನ ಮಾದರಿಯ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದಾರೆ.

ಕ್ರಿಕೆಟ್‌ ಕ್ಷೇತ್ರದ ಐತಿಹಾಸಿಕ ಘಟನೆಗಳನ್ನು ದಾಖಲಿಸುವ ಪ್ರತಿಷ್ಠಿತ ವಾರ್ಷಿಕ ಪುಸ್ತಕ ಇದಾಗಿದೆ. 2008ರಲ್ಲಿ ಕೊಹ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 32 ವರ್ಷದ ಕೊಹ್ಲಿ ಅವರು 254 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 12,169 ರನ್‌ಗಳನ್ನು ಗಳಿಸಿದ್ದಾರೆ.

‘ಮೊಟ್ಟಮೊದಲ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ ಪಂದ್ಯದ ಸುವರ್ಣಮಹೋತ್ಸವದ ಅಂಗವಾಗಿ ಐವರು ಶ್ರೇಷ್ಠ ಕ್ರಿಕೆಟಿಗರ ಕುರಿತು 2021ರ ಕೃತಿಯಲ್ಲಿ ಪ್ರಕಟಿಸಿಲಾಗಿದೆ. ಆ ಮೂಲಕ ಅವರಿಗೆ ಗೌರವ ನೀಡಲಾಗಿದೆ‘ ಎಂದು ವಿಸ್ಡನ್ ತಿಳಿಸಿದೆ.

‘1971 ರಿಂದ 2021ರವರೆಗೆ ಪ್ರತಿಯೊಂದು ದಶಕದಲ್ಲಿ ಒಬ್ಬ ಕ್ರಿಕೆಟಿಗನನ್ನು ಆಯ್ಕೆ ಮಾಡಲಾಗಿದೆ. 2010ರಿಂದೀಚೆಗೆ ವಿರಾಟ್ ಕೊಹ್ಲಿ ಸನ್ಮಾನಿತರಾಗಿದ್ದಾರೆ‘ ಎಂದು ವಿಸ್ಡನ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

2011ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡವನ್ನು ಕೊಹ್ಲಿ ಪ್ರತಿನಿಧಿಸಿದ್ದರು. ಅವರ ಖಾತೆಯಲ್ಲಿ 42 ಶತಕಗಳು ಇವೆ. 60 ಸರಾಸರಿಯಲ್ಲಿ ರನ್‌ಗಳನ್ನು ಕಲೆಹಾಕಿದ್ದಾರೆ.

1980ರಿಂದ ದಶಕದ ಕ್ರಿಕೆಟಿಗ ಗೌರವಕ್ಕೆ ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್ ಅವರನ್ನು ಆಯ್ಕೆ ಮಾಡಲಾಗಿದೆ. 1983ರಲ್ಲಿ ವಿಶ್ವಕಪ್ ಗೆದ್ದ ಭಾರತ ತಂಡವನ್ನು ಕಪಿಲ್ ಮುನ್ನಡೆಸಿದ್ದರು.

1990ರ ದಶಕದ ಗೌರವವನ್ನು ದಿಗ್ಗಜ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಗಳಿಸಿದ್ದಾರೆ.

ಇಂಗ್ಲೆಂಡ್‌ ತಂಡದ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರು ಸತತ ಎರಡನೇ ವರ್ಷವೂ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ ಪಡೆದಿದ್ದಾರೆ.

ಡಾಮ್ ಸಿಬ್ಲಿ, ಜ್ಯಾಕ್ ಕ್ರಾಲಿ, ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್, ಮೊಹಮ್ಮದ್ ರಿಜ್ವಾನ್ ಮತ್ತು ಡರೆನ್ ಸ್ಟೀವನ್ಸ್‌ 2021ರ ಗೌರವಕ್ಕೆ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾ ಮಹಿಳಾ ತಂಡದ ಬೆತ್ ಮೂನಿ, ವಿಶ್ವದ ಶ್ರೇಷ್ಠ ಕ್ರಿಕೆಟ್ ಆಟಗಾರ್ತಿಯಾಗಿದ್ದಾರೆ. ವಿಂಡೀಸ್ ಆಲ್‌ರೌಂಡರ್ ಕೀರನ್ ಪೊಲಾರ್ಡ್ ವರ್ಷದ ಟಿ20 ಮಾದರಿ ಕ್ರಿಕೆಟಿಗ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT