ಸೋಮವಾರ, ಮಾರ್ಚ್ 20, 2023
30 °C

ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್‌: ಆರನೇ ಸ್ಥಾನಕ್ಕೇರಿದ ರಾಹುಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ತಂಡದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌, ಕನ್ನಡಿಗ ಕೆ.ಎಲ್‌.ರಾಹುಲ್ ಐಸಿಸಿ ಟ್ವೆಂಟಿ–20 ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ. ತಂಡದ ನಾಯಕ ವಿರಾಟ್‌ ಕೊಹ್ಲಿ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಕೊಹ್ಲಿ ಅವರ ಬಳಿ ಸದ್ಯ 762 ಪಾಯಿಂಟ್‌ಗಳಿವೆ. ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ (888 ಪಾಯಿಂಟ್ಸ್), ಆಸ್ಟ್ರೇಲಿಯಾದ ಆ್ಯರನ್ ಫಿಂಚ್‌ (830), ಪಾಕಿಸ್ತಾನದ ಬಾಬರ್ ಆಜಂ (828) ಮತ್ತು ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ (774) ಮೊದಲ ನಾಲ್ಕು ಸ್ಥಾನಗಳಲ್ಲಿದ್ದಾರೆ.

ರಾಹುಲ್‌ 743 ಪಾಯಿಂಟ್ಸ್ ಗಳಿಸಿದ್ದು ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ಆಸ್ಟ್ರೇಲಿಯಾದ ಆಲ್‌ರೌಂಡರ್‌ ಗ್ಲೆನ್ ಮ್ಯಾಕ್ಸ್‌ವೆಲ್‌ ಏಳನೇ ಸ್ಥಾನದಲ್ಲಿದ್ದಾರೆ.

ಏಕದಿನ ರ‍್ಯಾಂಕಿಂಗ್‌ ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಏಕದಿನ ಬೌಲರ್‌ಗಳ ವಿಭಾಗದಲ್ಲಿ ವೇಗಿ ಜಸ್‌ಪ್ರೀತ್ ಬೂಮ್ರಾ ಒಂದು ಸ್ಥಾನ ಕುಸಿತ ಕಂಡು ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಆಲ್‌ರೌಂಡರ್‌ಗಳ ವಿಭಾಗದಲ್ಲಿ ರವೀಂದ್ರ ಜಡೇಜ ಒಂಬತ್ತನೇ ಸ್ಥಾನದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು