ದುಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ನಿಕಟಪೂರ್ವ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟರ್ಗಳ ರ್ಯಾಂಕಿಂಗ್ನಲ್ಲಿ ಕ್ರಮವಾಗಿ ಎಂಟು ಮತ್ತು 10ನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ಬೌಲರ್ಗಳ ವಿಭಾಗದಲ್ಲಿ ರವಿಚಂದ್ರನ್ಅಶ್ವಿನ್ ಎರಡನೇ ಸ್ಥಾನದಲ್ಲಿ ಮತ್ತು ಆಲ್ರೌಂಡರ್ಗಳ ವಿಭಾಗದಲ್ಲಿ ರವೀಂದ್ರ ಜಡೇಜ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿರುವ ಬಾಂಗ್ಲಾದೇಶದ ಲಿಟನ್ ದಾಸ್ 17ನೇ ಸ್ಥಾನಕ್ಕೇರಿದ್ದಾರೆ. ಇದೇ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಕೇವಲ ಒಂದು ರನ್ನಿಂದ ದ್ವಿಶತಕ ತಪ್ಪಿಸಿಕೊಂಡಿದ್ದ ಶ್ರೀಲಂಕಾದ ಎಂಜೆಲೊ ಮ್ಯಾಥ್ಯೂಸ್ 21ನೇ ಸ್ಥಾನದಲ್ಲಿದ್ದಾರೆ.

ಬ್ಯಾಟರ್ಗಳ ವಿಭಾಗದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಮತ್ತು ಬೌಲರ್ಗಳಲ್ಲಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.