ಶುಕ್ರವಾರ, ಡಿಸೆಂಬರ್ 4, 2020
22 °C

ಐಸಿಸಿ ಏಕದಿನ ರ‍್ಯಾಂಕಿಂಗ್‌: ಮುಂದುವರಿದ ಕೊಹ್ಲಿ, ರೋಹಿತ್‌ ಪಾರಮ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ಉಪನಾಯಕ ರೋಹಿತ್‌ ಶರ್ಮಾ ಅವರ ಪ್ರಾಬಲ್ಯ ಮುಂದುವರಿದಿದೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಕ್ರಮವಾಗಿ ಮೊದಲ ಎರಡು ಸ್ಥಾನಗಳನ್ನು ಇವರಿಬ್ಬರು ಅಲಂಕರಿಸಿದ್ದಾರೆ. ಬೌಲಿಂಗ್‌ ವಿಭಾಗದಲ್ಲಿ ಜಸ್‌ಪ್ರೀತ್‌ ಬೂಮ್ರಾ ಎರಡನೇ ಸ್ಥಾನದಲ್ಲಿದ್ದಾರೆ.

ಸದ್ಯ ಕೊಹ್ಲಿ ಬಳಿ 871 ಹಾಗೂ ರೋಹಿತ್‌ ಬಳಿ 855 ಪಾಯಿಂಟ್‌ಗಳಿವೆ. ವಿಶ್ವದಾದ್ಯಂತ ಕೋವಿಡ್‌–19 ಹಾವಳಿಯ ಹಿನ್ನೆಲೆಯಲ್ಲಿ ಕ್ರಿಕೆಟ್‌ ಚಟುವಟಿಕೆಗಳು ಸ್ಥಗಿತಗೊಂಡ ಬಳಿಕ ಇವರಿಬ್ಬರು ಯಾವುದೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ.

ಮಂಗಳವಾರ ಕೊನೆಗೊಂಡ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಸಾಮರ್ಥ್ಯ ತೋರಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಆಜಂ ಮೂರನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್‌ ವಿಭಾಗದ ಮೊದಲ ಸ್ಥಾನವು ನ್ಯೂಜಿಲೆಂಡ್ ವೇಗಿ ಟ್ರೆಂಟ್‌ ಬೌಲ್ಟ್‌ (722) ಬಳಿ ಇದೆ. ಎರಡನೇ ಸ್ಥಾನದಲ್ಲಿರುವ ಬೂಮ್ರಾ ಅವರಲ್ಲಿ 719 ಪಾಯಿಂಟ್‌ಗಳಿವೆ. ಪಾಕಿಸ್ತಾನದ ಎಡಗೈ ವೇಗಿ ಶಾಹೀನ್‌ ಆಫ್ರಿದಿ ಜೀವನಶ್ರೇಷ್ಠ 16ನೇ ಸ್ಥಾನದಲ್ಲಿದ್ದಾರೆ.

ಜಿಂಬಾಬ್ವೆ ಎದುರಿನ ಸರಣಿಯಲ್ಲಿ ಮಿಂಚಿದ್ದ ಪಾಕ್‌ ವೇಗಿ ವಹಾಬ್‌ ರಿಯಾಜ್‌ ಕೂಡ ಆರು ಸ್ಥಾನ ಜಿಗಿತ ಕಂಡು 60ನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು