ಮಂಗಳವಾರ, ಮಾರ್ಚ್ 2, 2021
23 °C

ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್: ವಿರಾಟ್, ರೋಹಿತ್ ಸ್ಥಾನ ಅಬಾಧಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುಬೈ (ಪಿಟಿಐ): ಭಾರತ ಕ್ರಿಕೆಟ್ ತಣಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.  ಆಸ್ಟ್ರೇಲಿಯಾ ಎದುರಿಗಿನ ಸರಣಿಯಲ್ಲಿ ವಿರಾಟ್ ಎರಡು ಅರ್ಧಶತಕ (89 ಮತ್ತು 63) ಗಳಿಸಿದ್ದರು. ಒಟ್ಟು 870 ಅಂಕಗಳು ಅವರ ಖಾತೆಯಲ್ಲಿವೆ. ಅದರಿಂದಾಗಿ ಅವರು ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ರೋಹಿತ್ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಆಡಿರಲಿಲ್ಲ. 842 ಅಂಕ ಹೊಂದಿರುವ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಆಜಂ (837), ನ್ಯೂಜಿಲೆಂಡ್‌ನ ರಾಸ್ ಟೇಲರ್ (818) ಮತ್ತು ಆಸ್ಟ್ರೇಲಿಯಾ ತಂಡದ  ಆ್ಯರನ್ ಫಿಂಚ್ (791) ನಂತರದ ಸ್ಥಾನಗಳಲ್ಲಿ ಇದ್ದಾರೆ.

ಬೂಮ್ರಾ ಅವರು 700 ಪಾಯಿಂಟ್ಸ್‌ನೊಂದಿಗೆ ತೃತೀಯ ಸ್ಥಾನ ಕಾಪಾಡಿಕೊಂಡಿದ್ದಾರೆ. ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ (722) ಮತ್ತು ಅಫ್ಗಾನಿಸ್ತಾನದ ಮುಜೀಬ್ ಉರ್ ರೆಹಮಾನ್ (701) ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಲ್ಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು