ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಸ್ಥಾನ ಉಳಿಸಿಕೊಂಡ ಕೊಹ್ಲಿ, ಕುಸಿದ ಬೂಮ್ರಾ

Last Updated 18 ಆಗಸ್ಟ್ 2020, 16:39 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ವೀವ್ ಸ್ಮಿತ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ ಎಂಟರಿಂದ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜ ಅವರ ಮೂರನೇ ಸ್ಥಾನ ಆಬಾಧಿತವಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಆಡಿದ ಪಾಕಿಸ್ತಾನದ ಬಾಬರ್ ಆಜಂ ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಐದನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT