ಭಾನುವಾರ, ಮೇ 9, 2021
25 °C
ನಾಲ್ಕನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಆರನೇ ಸ್ಥಾನಕ್ಕೇರಿದ ಪೂಜಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಚೇತೇಶ್ವರ್ ಪೂಜಾರ ಆರನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಕೊಹ್ಲಿ ಬಳಿ 862 ಪಾಯಿಂಟ್ಸ್ ಇದ್ದರೆ, ಪೂಜಾರ 760 ಪಾಯಿಂಟ್ಸ್ ಹೊಂದಿದ್ದಾರೆ. ಟೆಸ್ಟ್ ಮಾದರಿಯಲ್ಲಿ ಭಾರತ ತಂಡದ ಉಪನಾಯಕ ಆಗಿರುವ ಅಜಿಂಕ್ಯ ರಹಾನೆ 748 ಪಾಯಿಂಟ್ಸ್ ಕಲೆ ಹಾಕಿದ್ದು ಎಂಟನೇ ಸ್ಥಾನದಲ್ಲಿದ್ದಾರೆ.

ಪೂಜಾರ ಒಂದು ಸ್ಥಾನ ಏರಿಕೆ ಕಂಡಿದ್ದರೆ, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌ ರಿಷಭ್ ಪಂತ್‌ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕ್ರಮವಾಗಿ 13 ಮತ್ತು 18ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ಬ್ಯಾಟ್ಸ್‌ಮನ್‌ಗಳ ವಿಭಾಗದ ಅಗ್ರಸ್ಥಾನವನ್ನು ನ್ಯೂಜಿಲೆಂಡ್‌ ತಂಡದ ನಾಯಕ ಕೇನ್ ವಿಲಿಯಮ್ಸನ್‌ (919) ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ (891) ಹಾಗೂ ಮಾರ್ನಸ್ ಲಾಬುಷೇನ್‌ (878) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಸಂಪಾದಿಸಿದ್ದಾರೆ. ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ (823) ಅವರು ಕೊಹ್ಲಿ ನಂತರದ ಅಂದರೆ ಐದನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ಭಾರತದ ಅನುಭವಿ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ (760) ಹಾಗೂ ವೇಗಿ ಜಸ್‌ಪ್ರೀತ್ ಬೂಮ್ರಾ (757) ಕ್ರಮವಾಗಿ ಎಂಟು ಮತ್ತು ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ (908) ಅಗ್ರಸ್ಥಾನದಲ್ಲಿ ಮುಂದುವರಿದಿದ್ದರೆ, ಇಂಗ್ಲೆಂಡ್‌ನ ಸ್ಟುವರ್ಟ್‌ ಬ್ರಾಡ್‌ (839) ಮತ್ತು ನ್ಯೂಜಿಲೆಂಡ್‌ನ ವ್ಯಾಗ್ನರ್‌ (835), ಕಮಿನ್ಸ್ ಅವರನ್ನು ಹಿಂಬಾಲಿಸಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಭಾರತದ ರವೀಂದ್ರ ಜಡೇಜ (419) ಹಾಗೂ ಅಶ್ವಿನ್‌ (281) ಕ್ರಮವಾಗಿ ಮೂರು ಮತ್ತು ಆರನೇ ಸ್ಥಾನಗಳಲ್ಲಿ ಮುಂದುವರಿದ್ದಾರೆ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ (427) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು