ಬಂಗಾರಪೇಟೆ: ತಾಲ್ಲೂಕಿನ ಕಾಮಸಮುದ್ರದಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ‘ಸ್ಪೀಡ್ ಚಾಲೆಂಜರ್ಸ್ ಕಪ್’ ಅತ್ಯಂತ ಯಶಸ್ವಿಯಾಗಿ ಜರುಗಿತು.

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಒಟ್ಟು 16 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

ಪ್ರಥಮ ಬಹುಮಾನವನ್ನು ಹೊಸಕೋಟೆ ತಂಡವು ₹ 50 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ದ್ವಿತೀಯ ಬಹುಮಾನವನ್ನು ಆತಿಥೇಯ ಕಾಮಸಮುದ್ರ ತಂಡವು ₹ 30 ಸಾವಿರ ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ವಿಜೇತ ತಂಡಗಳಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬಹುಮಾನ ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಕ್ರೀಡೆ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಯುವಜನರಲ್ಲಿ ಶಿಸ್ತು ಮತ್ತು ಏಕತೆಯನ್ನು ಬೆಳೆಸುತ್ತವೆ. ಹಾಗಾಗಿ ಯುವಕರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಜೊತೆಗೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು.

ಪಿಎಸ್ಐ ಕಿರಣ್ ಕುಮಾರ್, ಅಜ್ಜು, ಶ್ರೀನಿವಾಸ್, ಸುರೇಶ್, ಬಾಬು, ಕೆ.ಪಿ ನಾಗರಾಜ್, ಸೀತಾರಾಮಪ್ಪ, ರಂಗಾಚಾರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-18-154263564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.