ಕೊಪ್ಪಳ: ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಐಪಿಎಲ್ ಫೈನಲ್ ಪಂದ್ಯದ ವೀಕ್ಷಣೆಗೆ ಬೃಹತ್ ಪರದೆ ಹಾಕಲಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ವರ್ಷದ ಟೂರ್ನಿಯಲ್ಲಿ ಚಾಂಪಿಯನ್ ಆಗಿತ್ತು. ಸತತ ಎರಡನೇ ಬಾರಿಗೆ ಫೈನಲ್ ತಲುಪಿರುವ ಬೆಂಗಳೂರಿನ ತಂಡ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವ ಹೆಗ್ಗುರಿ ಹೊಂದಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ 7.30ಕ್ಕೆ ನಡೆಯುವ ಫೈನಲ್ ಹೋರಾಟದಲ್ಲಿ ಬೆಂಗಳೂರು ತಂಡ ಗುಜರಾತ್ ಟೈಟನ್ಸ್ ಎದುರು ಹೋರಾಟ ನಡೆಸಲಿದೆ.

‘ಐಪಿಎಲ್ ಅಂತಿಮ ಪಂದ್ಯವನ್ನು ವೀಕ್ಷಿಸಲು ಬೃಹತ್ ಎಲ್ಇಡಿ ಪರದೆ ಅಳವಡಿಸಲಾಗಿದೆ. ಸಂಜೆ ಐದು ಗಂಟೆಯಿಂದಲೇ ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಆಸನ ಸೌಲಭ್ಯ, ಪೊಲೀಸ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಪಂದ್ಯಾಟದ ವೀಕ್ಷಣೆ ನಡೆಯಲಿದೆ’ ಎಂದು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷರೂ ಆದ ಸಂಸದ ರಾಜಶೇಖರ ಹಿಟ್ನಾಳ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1576484896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.