ಶನಿವಾರ, ಜೂಲೈ 11, 2020
22 °C

‘ಕ್ರಿಕೆಟ್‌ ಚಟುವಟಿಕೆಗಳನ್ನು ಕೆಎಸ್‌ಸಿಎ ರದ್ದು ಮಾಡಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು (ಕೆಎಸ್‌ಸಿಎ), ಈ ವರ್ಷದ ಎಲ್ಲಾ ಕ್ರಿಕೆಟ್‌ ಚಟುವಟಿಕೆಗಳನ್ನು ರದ್ದು ಮಾಡಿರುವುದಾಗಿ ಕೆಲ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದೆ. ಅವು ಸತ್ಯಕ್ಕೆ ದೂರವಾದವು. ನಾವು ಇದುವರೆಗೂ ಅಂತಹ ತೀರ್ಮಾನವನ್ನು ತೆಗೆದುಕೊಂಡಿಲ್ಲ’ ಎಂದು ಕೆಎಸ್‌ಸಿಎ ವಕ್ತಾರ ವಿನಯ್ ಮೃತ್ಯುಂಜಯ ತಿಳಿಸಿದ್ದಾರೆ.

‘ಬದಲಾದ ವೇಳಾಪಟ್ಟಿಗೆ ಅನುಗುಣವಾಗಿ ಕೆಎಸ್‌ಸಿಎ ಸಿಬ್ಬಂದಿ ಕೆಲಸ ಮಾಡಲಿದ್ದಾರೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿರುವುದನ್ನು ಗಮನಿಸುತ್ತಿದ್ದೇವೆ. ಕೋವಿಡ್‌ ಬಿಕ್ಕಟ್ಟು ಬಗೆಹರಿದ ಬಳಿಕ ಕ್ರಿಕೆಟ್‌ ಚಟುವಟಿಕೆಗಳನ್ನು ಪುನರಾರಂಭಿಸಲಿದ್ದೇವೆ’ ಎಂದು ಕೆಎಸ್‌ಸಿಎ ಖಜಾಂಚಿಯೂ ಆಗಿರುವ ಅವರು ಸೋಮವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು