ಸೋಮವಾರ, ಜುಲೈ 26, 2021
27 °C

ಕೆಎಸ್‌ಸಿಎಯಲ್ಲಿ ಜುಲೈನಿಂದ ಕ್ರಿಕೆಟ್ ಚಟುವಟಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ತನ್ನ ಎಲ್ಲ ಕ್ರಿಕೆಟ್‌ ಚಟುವಟಿಕೆಗಳನ್ನು ಮುಂದಿನ ತಿಂಗಳಿನ ಮೊದಲ ವಾರದಲ್ಲಿ  ಆರಂಭಿಸಲು ನಿರ್ಧರಿಸಿದೆ.

‘ಹೊಸ ವೇಳಾಪಟ್ಟಿಯನ್ನು ರಚಿಸಲಾಗಿದೆ. ಕೊರೊನಾ ವೈರಸ್‌ ಸೋಂಕು ಪ್ರಸರಣದ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ. ಜುಲೈ ಮೊದಲ ವಾರದಲ್ಲಿ ಚಟುವಟಿಕಗಳ ಮರುಚಾಲನೆಗೆ ಯೋಚಿಸಲಾಗಿದೆ. ಸರ್ಕಾರವು ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು. ಸಿಬ್ಬಂದಿ, ಆಟಗಾರರು ಮತ್ತಿತರರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ತರಬೇತಿ ಮತ್ತಿತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು’ ಎಂದು ಕೆಎಸ್‌ಸಿಎ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು