2026ರ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ, ಭಾರತ ತಂಡದ ತಾರಾ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಹಸೆಮಣೆ ಏರಿಲಿದ್ದಾರೆ. ಅವರು ಮಾರ್ಚ್ 14 ರಂದು ತಮ್ಮ ಬಾಲ್ಯದ ಗೆಳತಿಯೊಂದಿಗೆ ಮಸೂರಿಯ ರೆಸಾರ್ಟ್ನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಕುಲದೀಪ್ ಯಾದವ್ ಅವರು ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಅವರನ್ನು ವಿವಾಹವಾಗಲಿದ್ದಾರೆ. ಇವರ ವಿವಾಹವು 2025ರ ನವೆಂಬರ್ನಲ್ಲೇ ನಿಗದಿಯಾಗಿತ್ತು. ಕಾರಣಾಂತರಗಳಿಂದ ವಿವಾಹದ ದಿನಾಂಕ ಮುಂದೂಡಲಾಗಿತ್ತು. ಇದೀಗ ವಿಶ್ವಕಪ್ ಗೆಲುವಿನ ಸಂಭ್ರಮದೊಂದಿಗೆ ವಿವಾಹದ ಸಂಭ್ರಮವನ್ನೂ ಕುಲದೀಪ್ ಯಾದವ್ ಆಚರಿಸಿಕೊಳ್ಳಲು ಸಿದ್ಧರಾಗಿದ್ದಾರೆ.
.ಉನ್ನಾವ್ ಅತ್ಯಾಚಾರ: ಕುಲದೀಪ್ ಸೆಂಗರ್ ಶಿಕ್ಷೆ ಅಮಾನತಿಗೆ ದೆಹಲಿ ಹೈಕೋರ್ಟ್ ನಕಾರ.IND vs SA: ಕುಲದೀಪ್ ಯಾದವ್ ಸ್ಪಿನ್ ಮೋಡಿ.
ಕುಲದೀಪ್ ಹಾಗೂ ವಂಶಿಕಾ ಇಬ್ಬರು ಬಾಲ್ಯ ಸ್ನೇಹಿತರಾಗಿದ್ದಾರೆ. ವಂಶಿಕಾ ಪ್ರಸ್ತುತ ಎಲ್ಐಸಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಬಾಲ್ಯದಿಂದಲೂ ಇಬ್ಬರು ಜೊತೆಗೆ ಬೆಳೆದವರು. ಇಬ್ಬರು ಉತ್ತಮ ಸ್ನೇಹಿತರಾಗಿದ್ದರು. ಇಬ್ಬರ ನಡುವಿನ ಸ್ನೇಹವು ಪ್ರೀತಿಯಾಗಿ ಬದಲಾಗಿತ್ತು. ಕಳೆದ ವರ್ಷ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು.

ಈ ಇಬ್ಬರ ವಿವಾಹವು ಮಾರ್ಚ್ 14ರಂದು ನಡೆಯಲಿದ್ದು, ಮಾರ್ಚ್ 17ರಂದು ಉತ್ತರಪ್ರದೇಶದ ಲಖನೌದಲ್ಲಿ ಅದ್ದೂರಿ ಆರತಕ್ಷತೆ ಕೂಡ ನಡೆಯಲಿದೆ ಎಂದು ವರದಿಯಾಗಿದೆ.

2026 ರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡಿದ್ದ ಕುಲದೀಪ್ ಯಾದವ್, ಕೇವಲ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.

ಮದುವೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಕುಲದೀಪ್ ವಿವಾಹ ಕಾರ್ಯಕ್ರಮಕ್ಕೆ ಸಹ ಆಟಗಾರರು ಹಾಗೂ ಕ್ರಿಕೆಟ್ ಲೋಕದ ದಿಗ್ಗಜರು ಭಾಗಿಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.