ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್: ಹೈದರಾಬಾದ್ ತಂಡದ ಬ್ಯಾಟಿಂಗ್, ಬೌಲಿಂಗ್ ಕೋಚ್‌ಗಳಾಗಿ ಲಾರಾ, ಸ್ಟೇನ್ ನೇಮಕ

Last Updated 23 ಡಿಸೆಂಬರ್ 2021, 9:34 IST
ಅಕ್ಷರ ಗಾತ್ರ

ಹೈದರಾಬಾದ್: ಐಪಿಎಲ್‌ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತಂಡಕ್ಕೆ ಹೊಸ ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ವೆಸ್ಟ್‌ ಇಂಡೀಸ್‌ನ ಬ್ಯಾಟಿಂಗ್ ದಂತಕಥೆ ಬ್ರಿಯಾನ್ ಲಾರಾ ಮತ್ತು ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ ಡೇಲ್ ಸ್ಟೇನ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.

ಐಪಿಎಲ್‌ನಲ್ಲಿ ಕಾಮೆಂಟರಿ ಮೂಲಕ ಗಮನ ಸೆಳೆಯುತ್ತಿದ್ದ ಬ್ರಿಯಾನ್ ಲಾರಾ ಅವರು, ಎಸ್‌ಆರ್‌ಎಚ್ ತಂಡದ ತರುಬೇತುದಾರರಾಗಿ ನೇಮಕವಾಗಿದ್ದಾರೆ. ಬ್ಯಾಟಿಂಗ್ ಕೋಚ್ ಮತ್ತು ಕಾರ್ಯತಂತ್ರದ ಸಲಹೆಗಾರರಾಗಿ ಅವರನ್ನು ನೇಮಕ ಮಾಡಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಫ್ರಾಂಚೈಸಿ ಮಾಹಿತಿ ನೀಡಿದೆ.

ಐಪಿಎಲ್‌ನ ಹಲವು ತಂಡಗಳಲ್ಲಿ ಆಡಿರುವ ಡೇಲ್ ಸ್ಟೇನ್ ಅವರನ್ನು ಹೈದರಾಬಾದ್ ತಂಡದ ವೇಗದ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. ಈ ವರ್ಷದ ಆರಂಭದಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ಸ್ಟೇನ್ ನಿವೃತ್ತಿ ಘೋಷಿಸಿದ್ದರು. ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳಿಧರನ್ ಅವರು, ಸ್ಪಿನ್ ಬೌಲಿಂಗ್ ಕೋಚ್ ಆಗಿ ಮುಂದುವರಿಯಲಿದ್ದಾರೆ.

ಭಾರತದ ಮಾಜಿ ಕ್ರಿಕೆಟಿಗ ಹೇಮಂತ್ ಬದಾನಿ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ಮತ್ತು ಆಸ್ಟ್ರೇಲಿಯಾದ ಸೈಮನ್ ಕ್ಯಾಟಿಚ್ ಅವರನ್ನು ಸಹಾಯಕ ಕೋಚ್ ಆಗಿ ನೇಮಕ ಮಾಡಲಾಗಿದೆ.

ನಾಯಕ ಕೇನ್ ವಿಲಿಯಮ್ಸನ್, ಉಮ್ರನ್ ಮಲಿಕ್ ಮತ್ತು ಅಬ್ದುಲ್ ಸಮದ್ ಅವರನ್ನು ಹೈದರಾಬಾದ್ ತಂಡ ಉಳಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT