ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹ್ಯಾಟ್ರಿಕ್‌’ ಸಾಧನೆ ಮಾಡಲು ಪ್ರಯತ್ನಿಸುವೆ: ಮಾಲಿಂಗ

Last Updated 27 ಮೇ 2019, 12:20 IST
ಅಕ್ಷರ ಗಾತ್ರ

ಲಂಡನ್‌: ‘ವಿಶ್ವಕಪ್‌ನಲ್ಲಿ ಈಗಾಗಲೇ ‘ಹ್ಯಾಟ್ರಿಕ್‌’ ವಿಕೆಟ್‌ ಪಡೆದಿದ್ದೇನೆ. ಮತ್ತೊಮ್ಮೆ ಈ ಸಾಧನೆ ಮಾಡಬೇಕೆಂಬ ಆಸೆ ಇದೆ. ಈ ಬಾರಿ ಇಂಗ್ಲೆಂಡ್‌ನಲ್ಲಿ ನಡೆಯುವ ಟೂರ್ನಿಯಲ್ಲಿ ಈ ದಾಖಲೆ ಬರೆಯಲು ಪ್ರಯತ್ನಿಸುತ್ತೇನೆ’ ಎಂದು ಶ್ರೀಲಂಕಾ ತಂಡದ ವೇಗದ ಬೌಲರ್‌ ಲಸಿತ್‌ ಮಾಲಿಂಗ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಲಗೈ ವೇಗದ ಬೌಲರ್‌ ಮಾಲಿಂಗ, 2007ರ ಟೂರ್ನಿಯಲ್ಲಿ ‘ಹ್ಯಾಟ್ರಿಕ್‌’ ವಿಕೆಟ್‌ ಕಬಳಿಸಿದ್ದರು. ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ ಉರುಳಿಸಿ ಗಮನ ಸೆಳೆದಿದ್ದರು.

‘ಇಂಗ್ಲೆಂಡ್‌ನಲ್ಲಿ ಪಂದ್ಯಗಳನ್ನು ಆಡುವುದಕ್ಕೆ ತುಂಬಾ ಸಂತಸವಾಗುತ್ತದೆ. ಇಲ್ಲಿನ ಭಿನ್ನ ಪರಿಸ್ಥಿತಿಗೆ ಹೊಂದಿಕೊಂಡು ಪರಿಣಾಮಕಾರಿ ಸಾಮರ್ಥ್ಯ ತೋರುವುದು ಸವಾಲಿನ ಕೆಲಸ. ಆ ಸವಾಲಿಗೆ ಎದೆಯೊಡ್ಡಲು ಸಜ್ಜಾಗಿದ್ದೇನೆ’ ಎಂದು 35 ವರ್ಷ ವಯಸ್ಸಿನ ಆಟಗಾರ ನುಡಿದಿದ್ದಾರೆ.

‘ಈ ಸಲದ ಐಪಿಎಲ್‌ನಲ್ಲಿ 16 ವಿಕೆಟ್‌ ಕಬಳಿಸಿದ್ದೆ. ಈ ಸಾಮರ್ಥ್ಯ ನನ್ನಲ್ಲಿ ಹೊಸ ಹುರುಪು ಮೂಡುವಂತೆ ಮಾಡಿದೆ. ಇಂಗ್ಲೆಂಡ್‌ನಲ್ಲಿ ವಿಕೆಟ್‌ ಬೇಟೆಯಾಡಲು ಇದು ಪ್ರೇರಣೆಯಾಗಿದೆ’ ಎಂದಿದ್ದಾರೆ.

‘ಈ ಸಲ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ಲಂಕಾ ತಂಡದಲ್ಲಿ ಸಾಕಷ್ಟು ಮಂದಿ ಯುವ ಆಟಗಾರರಿದ್ದಾರೆ. ತಮ್ಮ ಸಾಮರ್ಥ್ಯವನ್ನು ಜಗಜ್ಜಾಹೀರುಗೊಳಿಸಲು ಅವರಿಗೆ ಈ ಟೂರ್ನಿ ವೇದಿಕೆಯಾಗಿದೆ. ತಂಡದಲ್ಲಿರುವ ಅನುಭವಿ ಆಟಗಾರರ ಮೇಲೂ ಹೆಚ್ಚಿನ ಜವಾಬ್ದಾರಿ ಇದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT