ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ನಗರ ಪ್ಲಾಸ್ಟಿಕ್ ಮುಕ್ತಗೊಳಿಸಿ

Last Updated 25 ಸೆಪ್ಟೆಂಬರ್ 2022, 15:05 IST
ಅಕ್ಷರ ಗಾತ್ರ

ಮೈಸೂರು: ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ‘ರಾಜ್ಯ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವೇದಿಕೆ’ಯ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

‘ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಳ್ಳುವ ಕೆಲಸವನ್ನು ಪಾಲಿಕೆ ಅಧಿಕಾರಿಗಳು ಮಾಡುತ್ತಿದ್ದಾರೆ. ಆದರೂ ಶಿವರಾಂಪೇಟೆ, ಧನ್ವಂತರಿ ರಸ್ತೆ, ದೇವರಾಜ ಅರಸು ರಸ್ತೆ, ಬಂಡಿಪಾಳ್ಯ ಎಪಿಎಂಡಿ ಯಾರ್ಡ್‌ನ ಹಲವು ಅಂಗಡಿಗಳಲ್ಲಿ ರಾಜಾರೋಷವಾಗಿ ಬಳಸಲಾಗುತ್ತಿದೆ. ಸಿಬ್ಬಂದಿಯು ಆಮಿಷಗಳಿಗೆ ಬಲಿಯಾಗಿದ್ದಾರೆ’ ಎಂದು ದೂರಿದರು.

‘ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಆದೇಶದ ಅನುಷ್ಠಾನ–ಪಾಲನೆಯಲ್ಲಿ ನಿರ್ಲಕ್ಷ್ಯ ವಹಿಸಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ವೇದಿಕೆಯ ಅಧ್ಯಕ್ಷ ಪಿ.ಜಯರಾಜ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕಂಸಾಳೆ ರವಿ ಹಾಗೂ ಸಂಘಟನಾ ಕಾರ್ಯದರ್ಶಿ ಕುಪ್ಪೆಗಾಲ ಅನಿಲ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT