ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಚೆಂಡು ತಲೆಗೆ ಬಡಿದು ವ್ಯಕ್ತಿ ಸಾವು

Published 10 ಜನವರಿ 2024, 16:07 IST
Last Updated 10 ಜನವರಿ 2024, 16:07 IST
ಅಕ್ಷರ ಗಾತ್ರ

ಮುಂಬೈ: ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಫೀಲ್ಡಿಂಗ್ ಮಾಡುವಾಗ ತಲೆಗೆ ಚೆಂಡು ಅಪ್ಪಳಿಸಿ  52 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಾತುಂಗಾದಲ್ಲಿರುವ ದಡ್ಕರ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಜಯೇಶ್ ಚುನ್ನಿಲಾಲ್ ಸವ್ಲಾ ಫೀಲ್ಡಿಂಗ್ ಮಾಡುತ್ತಿದ್ದರು. ಆದರೆ ಅದೇ ಮೈದಾನದಲ್ಲಿ ಇನ್ನೊಂದು ಪಂದ್ಯ ನಡೆಯುತ್ತಿತ್ತು. ಆ ಪಂದ್ಯದಲ್ಲಿ ಆಟಗಾರ ಆಡಿದ್ದ ಚೆಂಡು ಜಯೇಶ್ ಅವರ ತಲೆಯ ಹಿಂಬದಿಗೆ ಅಪ್ಪಳಿಸಿತ್ತು. 

ಪೆಟ್ಟು ತಿಂದ  ಜಯೇಶ್ ನೆಲಕ್ಕೆ ಕುಸಿದರು. ಕೂಡಲೇ ಆಸ್ಪತ್ತೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT