ನಾಟಿಂಗ್‌ಹ್ಯಾಂ: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಆರಂಭಿಕ ಆಟಗಾರ ಮಯಂಕ್ ಅಗರವಾಲ್ ಹೊರಗುಳಿಯುವಂತಾಗಿದೆ.
ಟ್ರೆಂಟ್‌ಬ್ರಿಜ್‌ನಲ್ಲಿ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಶಾರ್ಟ್ ಎಸೆತ ಅವರ ತಲೆಗೆ ಬಡಿದಿತ್ತು. ಪರಿಣಾಮವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ‘ಕಂಕಷನ್’ ನಿಯಮದ ಪ್ರಕಾರ ಅವರು ಪಂದ್ಯದಿಂದ ಹೊರಗುಳಿಯಬೇಕಾಗಿದೆ.
ಅಗರವಾಲ್ ವೈದ್ಯಕೀಯ ನಿಗಾದಲ್ಲಿ ಇರಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.
ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರ ದಾಳಿ ಎದುರಿಸುತ್ತಿದ್ದಾಗ ಚೆಂಡು ಅಗರವಾಲ್ ಅವರ ಹೆಲ್ಮೆಟ್‌ಗೆ ಬಡಿದಿತ್ತು. ಬಳಿಕ ಬಳಲಿದಂತೆ ಕಂಡುಬಂದಿದ್ದ ಅವರು ಬ್ಯಾಟಿಂಗ್ ನಿಲ್ಲಿಸಿದ್ದರು. ತಂಡದ ಫಿಸಿಯೊ ನಿತಿನ್ ಪಟೇಲ್ ನೆರವಿನಿಂದ ನೆಟ್ಸ್‌ನಿಂದ ನಿರ್ಗಮಿಸಿದ್ದರು.
ತಲೆಯ ಒಳಭಾಗಕ್ಕೆ ಗಾಯವಾಗಿರುವ ಲಕ್ಷಣಗಳು ಕಂಡುಬಂದ ಕಾರಣ ಅಗರವಾಲ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಮೊದಲ ಪಂದ್ಯದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.
ಅಗರವಾಲ್ ಅನುಪಸ್ಥಿತಿಯಲ್ಲಿ ಕೆ.ಎಲ್.ರಾಹುಲ್ ಆರಂಭಿಕನಾಗಿ ಕ್ರೀಸಿಗಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಇದೇ 4ರಿಂದ ಆರಂಭವಾಗಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.