ಸೋಮವಾರ, ಜುಲೈ 4, 2022
21 °C

IPL 2022: ಪಂಜಾಬ್ ಕಿಂಗ್ಸ್ ತಂಡಕ್ಕೆ ಮಗದೋರ್ವ ಕನ್ನಡಿಗ ನಾಯಕ ?

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಥಾನಕ್ಕೆ ಕನ್ನಡಿಗ ಮಯಂಕ್ ಅಗರವಾಲ್ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ ಎಂದು ವರದಿಯಾಗಿದೆ.

ಐಪಿಎಲ್ ಮೆಗಾ ಹರಾಜಿಗಿಂತಲೂ ಮೊದಲೇ ಮಯಂಕ್ ಅಗರವಾಲ್ ಹಾಗೂ ಯುವ ವೇಗದ ಬೌಲರ್ ಅರ್ಶದೀಪ್ ಸಿಂಗ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸ್ ತನ್ನ ಬಳಿಯೇ ಉಳಿಸಿಕೊಂಡಿತ್ತು.

ಮಯಂಕ್ ಅಗರವಾಲ್ ಅವರಿಗೆ ನಾಯಕ ಪಟ್ಟ ಒಲಿಯುವುದು ಬಹುತೇಕ ಖಚಿತವೆನಿಸಿದೆ. ಈ ವಾರದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಐಪಿಎಲ್ ಮೂಲಗಳು ತಿಳಿಸಿವೆ.

ಹರಾಜಿನಲ್ಲಿ ಶಿಖರ್ ಧವನ್, ಜಾನಿ ಬೆಸ್ಟೊ, ಲಿಯಮ್ ಲಿವಿಂಗ್‌ಸ್ಟೋನ್, ಕಗಿಸೊ ರಬಾಡ, ಶಾರೂಕ್ ಖಾನ್ ಸಹಿತ ಹಲವು ಆಟಗಾರರನ್ನು ಪಂಜಾಬ್ ಕಿಂಗ್ಸ್ ತಂಡವು ಖರೀದಿಸಿತ್ತು.

ನಾಯಕ ರೇಸ್‌ನಲ್ಲಿ ಶಿಖರ್ ಧವನ್ ಕೂಡ ಕಾಣಿಸಿಕೊಂಡಿದ್ದರು. ಆದರೆ ಕೆ.ಎಲ್. ರಾಹುಲ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಮಗದೋರ್ವ ಕನ್ನಡಿಗ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಕಳೆದ ವರ್ಷ ರಾಹುಲ್ ಗಾಯಗೊಂಡಾಗ 31 ವರ್ಷದ ಮಯಂಕ್ ತಂಡವನ್ನು ಮುನ್ನಡೆಸಿದ್ದರು. ಅಲ್ಲದೆ ಕಳೆದೆರಡು ಆವೃತ್ತಿಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಹೊಸ ನಾಯಕತ್ವದಲ್ಲಿ ಪಂಜಾಬ್‌ಗೆ ಟ್ರೋಫಿ ಗೆಲ್ಲಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ. 2014ರಲ್ಲಿ ರನ್ನರ್-ಅಪ್ ಪ್ರಶಸ್ತಿ ಗೆದ್ದಿರುವುದು ತಂಡದ ಇದುವರೆಗಿನ ಶ್ರೇಷ್ಠ ಸಾಧನೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು