ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆಸ್ಟ್‌: ಮಯಂಕ್‌ಗೆ ಬುಲಾವ್

Last Updated 27 ಜೂನ್ 2022, 12:34 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಆರಂಭಿಕ ಬ್ಯಾಟರ್‌, ಕರ್ನಾಟಕದ ಮಯಂಕ್‌ ಅಗರವಾಲ್ ಅವರನ್ನು ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ನಾಯಕ ರೋಹಿತ್‌ ಶರ್ಮ ಅವರಿಗೆ ಕೋವಿಡ್‌ ದೃಢಪಟ್ಟಿರುವುದರಿಂದ ಬದಲಿ ಆಟಗಾರನಾಗಿ ಮಯಂಕ್‌ಗೆ ಸ್ಥಾನ ನೀಡಲಾಗಿದೆ.

‘ಮಯಂಕ್‌ ಅವರು ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದು, ಬರ್ಮಿಂಗ್‌ಹ್ಯಾಂನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇಂಗ್ಲೆಂಡ್‌ನ ಕೋವಿಡ್‌ ಮಾರ್ಗಸೂಚಿಯಂತೆ ಆರ್‌ಟಿಪಿಸಿಆರ್‌ ನೆಗೆಟಿವ್‌ ಬಂದರೆ ಕ್ವಾರಂಟೈನ್‌ನಲ್ಲಿರುವ ಅಗತ್ಯವಿಲ್ಲ. ಆದ್ದರಿಂದ ಜುಲೈ 1 ರಂದು ಆರಂಭವಾಗುವ ಟೆಸ್ಟ್‌ನಲ್ಲಿ ಆಡುವ ಅನಿವಾರ್ಯತೆ ಒದಗಿದರೆ ಮಯಂಕ್‌ ಲಭ್ಯರಿರುತ್ತಾರೆ’ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

21 ಟೆಸ್ಟ್‌ಗಳಲ್ಲಿ ಆಡಿರುವ ಮಯಂಕ್, 41.33 ಸರಾಸರಿಯಲ್ಲಿ 1,488 ರನ್‌ ಗಳಿಸಿದ್ದಾರೆ. ಮಾರ್ಚ್‌ನಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆದ ಸರಣಿಯಲ್ಲಿ ಅವರು ಕೊನೆಯದಾಗಿ ಆಡಿದ್ದರು. ಕೊನೆಯದಾಗಿ ಆಡಿದ ಎರಡು ಟೆಸ್ಟ್‌ಗಳ ಮೂರು ಇನಿಂಗ್ಸ್‌ಗಳಲ್ಲಿ ಅವರು ಕ್ರಮವಾಗಿ 33, 4 ಹಾಗೂ 22 ರನ್‌ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT