ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಸಿಎ ಅಧ್ಯಕ್ಷ ಅಮೋಲ್ ಹೃದಯಸ್ತಂಭನದಿಂದ ನಿಧನ

Published 10 ಜೂನ್ 2024, 14:51 IST
Last Updated 10 ಜೂನ್ 2024, 14:51 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಅಧ್ಯಕ್ಷ ಅಮೋಲ್ ಕಾಳೆ ಅವರು ನ್ಯೂಯಾರ್ಕ್‌ನಲ್ಲಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. 

ಕಾರ್ಯದರ್ಶಿ ಅಜಿಂಕ್ಯ ನಾಯಕ್ ಮತ್ತು ಅಪೆಕ್ಸ್ ಕೌನ್ಸಿಲ್ ಸದಸ್ಯ ಸೂರಜ್ ಸಮತ್ ಸೇರಿದಂತೆ ಇತರ ಎಂಸಿಎ ಅಧಿಕಾರಿಗಳೊಂದಿಗೆ ಕಾಳೆ ಭಾನುವಾರ ನಾಸೌ ಕೌಂಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡವಿನ ಪಂದ್ಯ ವೀಕ್ಷಿಸಿದ್ದರು.  

2022ರ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಭಾರತದ ಮಾಜಿ ಆಟಗಾರ ಸಂದೀಪ್ ಪಾಟೀಲ್ ಅವರನ್ನು ಸೋಲಿಸಿ, 47 ವರ್ಷದ ಕಾಳೆ ಎಂಸಿಎ ಅಧ್ಯಕ್ಷರಾಗಿದ್ದರು. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT