ಬೆಂಗಳೂರು: ಶಾಸಕರಿಗೆ ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೂರು ಟಿಕೆಟ್ ಹಾಗೂ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಎರಡು ಟಿಕೆಟ್ ಉಚಿತವಾಗಿ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಒಪ್ಪಿದೆ. ಅಲ್ಲದೆ, ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಎರಡು ಹೆಚ್ಚುವರಿ ಟಿಕೆಟ್ ಖರೀದಿಸಲು ಅವಕಾಶ ನೀಡಿದೆ.

ಕೆಎಸ್ಸಿಎ ಪದಾಧಿಕಾರಿಗಳು, ಆರ್ಸಿಬಿ ಹಾಗೂ ಡಿಎನ್ಎ ಸಂಸ್ಥೆಯ ಪ್ರತಿನಿಧಿಗಳ ಜೊತೆ ಸೋಮವಾರ ಚರ್ಚೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಮಾಹಿತಿ ನೀಡಿದರು.

‘ಕಳೆದ ವಾರ ಮೊದಲ ಪಂದ್ಯದ ಟಿಕೆಟ್ ಮಾರಾಟವಾಗಿದ್ದ ಕಾರಣ ಎರಡು ಟಿಕೆಟ್ ನೀಡಲು ಕೆಎಸ್ಸಿಎಯವರು ಒಪ್ಪಿದ್ದರು. ಕ್ರಿಕೆಟ್ ಸಂಸ್ಥೆಯವರು ಅನೇಕ ಒಪ್ಪಂದಗಳನ್ನು ಮಾಡಿಕೊಂಡಿರುತ್ತಾರೆ. ಹೀಗಾಗಿ, ಈ ತೀರ್ಮಾನಕ್ಕೆ ಬರಲಾಗಿದೆ. ಐಪಿಎಲ್ ಕ್ರಿಕೆಟ್ ಬಗ್ಗೆ ಆಸಕ್ತಿ ಇಲ್ಲದವರು ಲಿಖಿತವಾಗಿ ತಿಳಿಸಿದರೆ, ಅಂಥವರಿಗೆ ಟಿಕೆಟ್ ನೀಡುವುದಿಲ್ಲ. ಯಾರಿಗೂ ಬಲವಂತವಿಲ್ಲ’ ಎಂದರು.

ಶಾಸಕರು ಹೆಚ್ಚಿನ ಟಿಕೆಟ್ಗಳಿಗೆ ಬೇಡಿಕೆ ಇಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅನೇಕ ಬೇಡಿಕೆಗಳು ಬರುತ್ತವೆ. ಎಲ್ಲವನ್ನೂ ಈಡೇರಿಸಲು ಸಾಧ್ಯವಿಲ್ಲ. ಅವರ ಬೇಡಿಕೆಗಳ ಆಧಾರದಲ್ಲಿ ಚರ್ಚೆ ಮಾಡಿ, ಪರಿಸ್ಥಿತಿಗೆ ಅನುಗುಣವಾಗಿ ಈ ತೀರ್ಮಾನ ಮಾಡಲಾಗಿದೆ. ನಾನು ರಾಜಸ್ಥಾನ, ಮುಂಬೈ, ದೆಹಲಿ, ಕೊಲ್ಕತ್ತ ಹಾಗೂ ಗುಜರಾತ್ ಅಧಿಕಾರಿಗಳ ಜತೆಗೂ ಚರ್ಚೆ ಮಾಡಿದ್ದೇನೆ’ ಎಂದರು.

‘ಸುಮಾರು ಶೇ 50ರಿಂದ 60ರಷ್ಟು ಟಿಕೆಟ್ಗಳನ್ನು ಸರ್ಕಾರಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ವರ್ಗದವರಿಗೆ ವಿತರಿಸಲಾಗುತ್ತಿದೆ. ಅವರಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಹಸ್ತಕ್ಷೇಪ ಕಡಿಮೆ ಇದೆ’ ಎಂದೂ ಹೇಳಿದರು.

ಆಸನ ಸಂಖ್ಯೆ ಹೆಚ್ಚಳ: ‘ಚಿನ್ನಸ್ವಾಮಿ ಕ್ರಿಡಾಂಗಣದ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಯಾವ ರೀತಿ ಆಸನಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಮಾತನಾಡಿದ್ದೇವೆ. ಬೇರೆ ಕಡೆ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ಗುರುತಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಆಯುಕ್ತರ ಜತೆ ಚರ್ಚಿಸಲಾಗಿದೆ. ಈ ಕುರಿತ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಚರ್ಚಿಸಿ ಅಗತ್ಯ ಅನುಮತಿ ನೀಡಲಾಗುವುದು. 20 ಸಾವಿರ ಆಸನಗಳ ಸಂಖ್ಯೆ ಹೆಚ್ಚಳ ಮಾಡಿದರೆ ಜನರಿಗೂ ಅನುಕೂಲ ಆಗಲಿದೆ’ ಎಂದು ತಿಳಿಸಿದರು.

ಹಸ್ತಕ್ಷೇಪ ಇಲ್ಲ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕರು ಹಾಗೂ ಸಚಿವರಿಗೆ ಪ್ರತ್ಯೇಕ ಗ್ಯಾಲರಿ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ‘ನಾನು ಆ ವಿಚಾರಕ್ಕೆ ಹೋಗುವುದಿಲ್ಲ. ಅದು ಕೆಎಸ್ಸಿಎ ಪದಾಧಿಕಾರಿಗಳಿಗೆ ಬಿಟ್ಟ ವಿಚಾರ. ಅವರ ವ್ಯವಹಾರಗಳಲ್ಲಿ ಅತಿಯಾಗಿ ಹಸ್ತಕ್ಷೇಪ ಮಾಡುವುದಿಲ್ಲ. ನಾವು ಶಾಸಕರು, ಸಂಸದರಾಗಿರಬಹುದು. ಶಾಸಕರಿಂದ ಟಿಕೆಟ್ ಮನವಿ ಬಂದ ಕಾರಣ ಚರ್ಚೆ ಮಾಡಿದ್ದೇನೆ’ ಎಂದರು.

‘ಈಗಾಗಲೇ ಸರ್ಕಾರ ಕ್ರೀಡಾಂಗಣ ನಿರ್ಮಿಸಲು ನಿರ್ಧರಿಸಿದ್ದು, ಕೆಎಸ್ಸಿಎಗೂ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗ ನೀಡಲಾಗುವುದೇ’ ಎಂಬ ಪ್ರಶ್ನೆಗೆ, ‘ನಾವು ಈಗಾಗಲೇ ಕೆಎಸ್ಸಿಎಯವರಿಗೆ 25 ಎಕರೆ ಜಾಗ ನೀಡಿದ್ದೇವೆ. ತುಮಕೂರು, ಮೈಸೂರಿನಲ್ಲಿ ಜಾಗ ನೀಡಿದ್ದೇವೆ. ಬೆಂಗಳೂರಿನಲ್ಲಿ ಸೂರ್ಯನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ’ ಎಂದು ತಿಳಿಸಿದರು.

ಐಪಿಎಲ್ ಕ್ರಿಕೆಟ್ ಪಂದ್ಯಗಳ ಉಚಿತ ಟಿಕೆಟ್ ಕೊಡಿ ಎಂದು ಶಾಸಕರು ಕೇಳುವುದು ತಪ್ಪು. ಪಂದ್ಯ ವೀಕ್ಷಿಸುವ ಆಸೆ ಇರುವವರು ಹಣ ಕೊಟ್ಟು ನೋಡಲಿ. ಅದೇ ಒಳ್ಳೆಯದು

–ಡಿ.ಕೆ. ಸುರೇಶ್ ಬಮೂಲ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.