ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್ ಏಕದಿನ ಕ್ರಿಕೆಟ್ ತಂಡದ 7 ಸದಸ್ಯರಿಗೆ ಕೋವಿಡ್

Last Updated 6 ಜುಲೈ 2021, 10:26 IST
ಅಕ್ಷರ ಗಾತ್ರ

ಲಂಡನ್: ಇಂಗ್ಲೆಂಡ್‌ನ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ತಂಡದ ಏಳು ಸದಸ್ಯರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ತಂಡವು ಬ್ರಿಸ್ಟಲ್‌ನಲ್ಲಿ ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯ ಆಡಿತ್ತು. ಅದಾದ ಮರುದಿನ ನಡೆಸಿದ ಪರೀಕ್ಷೆಯಲ್ಲಿ ತಂಡದ ಮೂವರು ಆಟಗಾರರು ಮತ್ತು ನಾಲ್ವರು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಡೀ ತಂಡದ ಸದಸ್ಯರು ಭಾನುವಾರದಿಂದಲೇ ಪ‍್ರತ್ಯೇಕ ವಾಸದಲ್ಲಿ ಇದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಪಾಕಿಸ್ತಾನ ವಿರುದ್ಧದ ಆರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಬುಧವಾರ ಆರಂಭವಾಗಲಿದೆ. ಈ ಸರಣಿಗೆ ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಹೊಸ ತಂಡವನ್ನು ಘೋಷಿಸಲು ಇಂಗ್ಲೆಂಡ್ ಮುಂದಾಗಿದೆ.

ಆಗಸ್ಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT