ಕೋಲ್ಕತ್ತ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯ 65ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದಿರುವ ಕೋಲ್ಕತ್ತ ನೈಟ್ರೈಡರ್ಸ್(ಕೆಕೆಆರ್) ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.

ಅಜಿಂಕ್ಯ ರಹಾನೆ ನಾಯಕತ್ವದ ಕೆಕೆಆರ್ ತಂಡವು ಈ ಆವೃತ್ತಿಯಲ್ಲಿ ಆಡಿರುವ 12 ಪಂದ್ಯದಲ್ಲಿ 5ರಲ್ಲಿ ಗೆಲುವು ದಾಖಲಿಸಿದ್ದು, ಒಟ್ಟು 11 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಆಡಿರುವ 12 ಪಂದ್ಯಗಳಲ್ಲಿ ಕೇವಲ 4ರಲ್ಲಿ ಗೆಲುವು ಸಾಧಿಸಿದ್ದು, ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ.

ರಹಾನೆ ಪಡೆಯು ಟೂರ್ನಿಯಲ್ಲಿ ಜೀವಂತವಾಗಿ ಇರಬೇಕಾದರೆ, ತವರಿನ ಅಂಗಳದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.