ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WPL–2023 | ಆತ್ಮವಿಶ್ವಾಸದಲ್ಲಿರುವ ಮುಂಬೈಗೆ ಬೆಂಗಳೂರು ಸವಾಲು

Last Updated 5 ಮಾರ್ಚ್ 2023, 19:30 IST
ಅಕ್ಷರ ಗಾತ್ರ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಶುಭಾರಂಭ ಮಾಡಿರುವ ಮುಂಬೈ ಇಂಡಿಯನ್ಸ್ ತಂಡದವರು ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆಯುವ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸವಾಲು ಎದುರಿಸಲಿದೆ.

ಶನಿವಾರ ನಡೆದಿದ್ದ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌, 143 ರನ್‌ಗಳಿಂದ ಗುಜರಾತ್‌ ಜೈಂಟ್ಸ್‌ ತಂಡವನ್ನು ಮಣಿಸಿತ್ತು. ಮೊದಲ ಪಂದ್ಯದಲ್ಲಿ ಸೋತಿರುವ ಆರ್‌ಸಿಬಿ ತಂಡ ಗೆಲುವಿನ ಒತ್ತಡದೊಂದಿಗೆ ಆಡಲಿದೆ.

ಇಂದಿನ ಪಂದ್ಯ

ಆರ್‌ಸಿಬಿ– ಮುಂಬೈ ಇಂಡಿಯನ್ಸ್‌

ಆರಂಭ: ರಾತ್ರಿ 7.30

ನೇರ ಪ್ರಸಾರ: ಸ್ಪೋರ್ಟ್ಸ್‌ 18 ನೆಟ್‌ವರ್ಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT