ಮೆಲ್ಬರ್ನ್: ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಪ್ರವಾಸಿ ಭಾರತ ತಂಡದ ವಿರುದ್ಧ ಇದೇ 19ರಂದು ಆರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿ ಆಡುವ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಚೇತರಿಕೆಯಲ್ಲಿರುವ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಮಿಚೆಲ್ ಮಾರ್ಚ್ ನಾಯಕರಾಗಿ ಮುಂದುವರಿದಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಿಂದ ಮರಳಿದ ಬಳಿಕ ಸ್ಟಾರ್ಕ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲೂ ಆಡಿರಲಿಲ್ಲ. 35 ವರ್ಷ ವಯಸ್ಸಿನ ಬೌಲರ್, ಸೆಪ್ಟೆಂಬರ್ನಲ್ಲಿ ಟಿ20 ಮಾದರಿಗೆ ವಿದಾಯವನ್ನೂ ಹೇಳಿದ್ದಾರೆ. ಆ್ಯಷಸ್ ಸರಣಿಗೆ ಮುನ್ನ ಅವರ ಕಾರ್ಯಭಾರದ ಒತ್ತಡವನ್ನು ಎಚ್ಚರಿಕೆಯಿಂದ ನಿಭಾಯಿಸಲಾಗುತ್ತಿದೆ.

2024ರ ನವೆಂಬರ್ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಸಲ ಏಕದಿನ ಪಂದ್ಯ ಆಡಿದ್ದರು. ಸ್ಟಾರ್ಕ್ ಜೊತೆಗೆ ಬ್ಯಾಟರ್ ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಶಾರ್ಟ್ ಮತ್ತು ಮಿಚ್ ಒವೆನ್ಸ್ ಅವರೂ ತಂಡದಲ್ಲಿದ್ದಾರೆ. ರೆನ್ಶಾ ಪದಾರ್ಪಣೆಗೆ ಕಾಯುತ್ತಿದ್ದಾರೆ. ಆಸ್ಟ್ರೇಲಿಯಾ ಈ ಹಿಂದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಎದುರು 1–2 ರಲ್ಲಿ ಸೋತಿತ್ತು.

ಏಕದಿನ ಸರಣಿಯ ನಂತರ ಐದು ಪಂದ್ಯಗಳ ಟಿ20 ಸರಣಿಯೂ ಇದ್ದು, ಮೊದಲ ಎರಡು ಪಂದ್ಯಗಳಿಗೆ ತಂಡವನ್ನು ಹೆಸರಿಸಲಾಗಿದೆ.

ನ್ಯೂಜಿಲೆಂಡ್ ವಿರುದ್ಧ ಸರಣಿಯ ವೇಳೆ ಮಣಿಕಟ್ಟಿನ ಗಾಯ ಅನುಭವಿಸಿದ ಗ್ಲೆನ್ ಮ್ಯಾಕ್ಸ್ವೆಲ್ ಅವರೂ ತಂಡಕ್ಕೆ ಆಯ್ಕೆಯಾಗಿಲ್ಲ.

15 ಆಟಗಾರರ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕಾನೊಲಿ, ಬೆನ್ ದ್ವಾರ್ಷಿಯಸ್, ನಥಾನ್ ಎಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಒವೆನ್, ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್ ಮತ್ತು ಆ್ಯಡಂ ಜಂಪಾ.

ಟಿ20 ತಂಡ (2 ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಷಿಯಸ್, ನಥಾನ್ ಎಲಿಸ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುನ್ಹೆಮನ್, ಮಿಚೆಲ್ ಒವೆನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಆ್ಯಡಂ ಜಂಪಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.