ಶನಿವಾರ, ಏಪ್ರಿಲ್ 1, 2023
23 °C

ಮಹಿಳಾ ಪ್ರೀಮಿಯರ್ ಲೀಗ್: ಗುಜರಾತ್ ಜೈಂಟ್ಸ್‌ಗೆ ಮಿಥಾಲಿ ಮೆಂಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ಮುಂಬರುವ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಗುಜರಾತ್ ಜೈಂಟ್ಸ್ ತಂಡಕ್ಕೆ ಮೆಂಟರ್ ಆಗಿ ನೇಮಕ ಮಾಡಲಾಗಿದೆ. 

23 ವರ್ಷಗಳ ಕಾಲ ಭಾರತ ತಂಡದಲ್ಲಿ ಆಡಿದ್ದ ಮಿಥಾಲಿ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ್ದಾರೆ. 40 ವರ್ಷದ ಮಿಥಾಲಿ ಈಚೆಗೆ ನಿವೃತ್ತಿ ಘೋಷಿಸಿದ್ದರು.  

‘ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ಆಯೋಜನೆಯಾಗುತ್ತಿದೆ. ಮಹಿಳಾ ಕ್ರಿಕೆಟ್ ಬೆಳವಣಿಗೆಯ ದೃಷ್ಟಿಯಿಂದ ಇದೊಂದು ಪ್ರಮುಖ ಹೆಜ್ಜೆಯಾಗಿದೆ. ಅದಾನಿ ಸಮೂಹವು ಕ್ರಿಕೆಟ್‌ನಲ್ಲಿ ಸಹಭಾಗಿತ್ವ ಹೊಂದಿರುವುದು ಆಶಾದಾಯಕ ಬೆಳವಣಿಗೆ’ ಎಂದು ಮಿಥಾಲಿ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು