ಬುಧವಾರ, ಆಗಸ್ಟ್ 4, 2021
22 °C

ಮಹಿಳಾ ಕ್ರಿಕೆಟ್: ಮಿಥಾಲಿ ಬಳಗಕ್ಕೆ ‘ಸಮಾಧಾನಕರ‘ ಜಯದ ಗುರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವೂಸ್ಟರ್: ತಮ್ಮ ಕತ್ತುನೋವಿನಿಂದ ಚೇತರಿಸಿಕೊಂಡಿರುವ ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಶನಿವಾರ ನಡೆಯಲಿರುವ ಇಂಗ್ಲೆಂಡ್ ಎದುರಿನ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡವು ಎರಡೂ ಪಂದ್ಯಗಳಲ್ಲಿ ಸೋತಿದೆ.  ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ತಂಡವು ದ್ವಿಶತಕದ ಗಡಿ ದಾಟಲು ನಾಯಕಿ ಮಿಥಾಲಿಯ ಅರ್ಧಶತಕಗಳು ನೆರವಾಗಿದ್ದವು. ಹರ್ಮನ್ ಪ್ರೀತ್ ಕೌರ್, ಜೆಮಿಮಾ ರಾಡ್ರಿಗಸ್ ಮತ್ತು ಸ್ಮೃತಿ ಮಂದಾನ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡದಿರುವ ಕಾರಣ ದೊಡ್ಡ ಮೊತ್ತ ಪೇರಿಸುವುದು ಸಾಧ್ಯವಾಗಿರಲಿಲ್ಲ.

ನವಪ್ರತಿಭೆ ಶಫಾಲಿ ವರ್ಮಾ ಎರಡನೇ ಪಂದ್ಯದಲ್ಲಿ ಅರ್ಧಶತಕದ ಸಮೀಪ ಎಡವಿದ್ದರು.  ಆ ಪಂದ್ಯದಲ್ಲಿ ಇಂಗ್ಲೆಂಡ್‌ನ ಮಧ್ಯಮಕ್ರಮಾಂಕದ ಬ್ಯಾಟರ್ ಸೋಫಿಯಾ ಡಂಕ್ಲಿ ಅವರನ್ನು ಕಟ್ಟಿಹಾಕುವಲ್ಲಿ ಭಾರತದ ಬೌಲರ್‌ಗಳು ವಿಫಲರಾಗಿದ್ದರು. ಜೂಲನ್ ಗೋಸ್ವಾಮಿ ಆ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಮಹತ್ವದ ಕಾಣಿಕೆ ನೀಡಿದ್ದರು. ಇದೀಗ ಕೊನೆಯ ಪಂದ್ಯದಲ್ಲಿ ಸಮಾಧಾನಕರ ಜಯದ ಗುರಿಯೊಂದಿಗೆ ಮಿಥಾಲಿ ಬಳಗ ಕಣಕ್ಕಿಳಿಯಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು