ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ರ‍್ಯಾಂಕಿಂಗ್‌: ಮಿಥಾಲಿ, ಸ್ಮೃತಿ ಸ್ಥಾನ ಸ್ಥಿರ

Last Updated 16 ನವೆಂಬರ್ 2021, 12:47 IST
ಅಕ್ಷರ ಗಾತ್ರ

ದುಬೈ: ಭಾರತದ ಮಿಥಾಲಿ ರಾಜ್ ಹಾಗೂ ಸ್ಮೃತಿ ಮಂದಾನ ಅವರು ಐಸಿಸಿ ಏಕದಿನ ಬ್ಯಾಟಿಂಗ್‌ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಮೂರು ಮತ್ತು ಆರನೇ ಸ್ಥಾನಗಳಲ್ಲಿ ಮುಂದುವರಿದಿದ್ದಾರೆ.

ಮಂಗಳವಾರ ರ‍್ಯಾಂಕಿಂಗ್‌ ಪ್ರಕಟವಾಗಿದ್ದು, ಅನುಭವಿ ವೇಗದ ಬೌಲರ್‌ ಜೂಲನ್ ಗೋಸ್ವಾಮಿ ಬೌಲರ್‌ಗಳ ವಿಭಾಗದಲ್ಲಿ ಎರಡನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ. ಆಲ್‌ರೌಂಡರ್‌ ವಿಭಾಗದಲ್ಲಿ ದೀಪ್ತಿ ಶರ್ಮಾ ಐದನೇ ಸ್ಥಾನದಲ್ಲಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ನಾಯಕಿ ಸ್ಟೆಫಾನಿ ಟೇಲರ್‌ ಬ್ಯಾಟಿಂಗ್ ಕ್ರಮಾಂಕದಲ್ಲಿ 12ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಪಾಕಿಸ್ತಾನ ತಂಡದ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ ಅವರು ಅಜೇಯ ಶತಕ (102) ಗಳಿಸಿದ್ದರು. ಸ್ಟೆಫಾನಿ ಅವರ ಸಹ ಆಟಗಾರ್ತಿ ಹೇಲಿ ಮ್ಯಾಥ್ಯೂ ನಾಲ್ಕು ಸ್ಥಾನಗಳ ಜಿಗಿತ ಕಂಡಿದ್ದು 25ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT