ಶುಕ್ರವಾರ, ಮೇ 27, 2022
31 °C

ರಾಷ್ಟ್ರೀಯ ಟಿ20 ಟ್ರೋಫಿ ಕ್ರಿಕೆಟ್‌ ಟೂರ್ನಿ: ಮಿಥಾಲಿ ರಾಜ್‌ ಕಣಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯುವ ಕುರಿತು ಊಹಾಪೋಹಗಳು ಹರಿದಾಡುತ್ತಿವೆ. ಈ ಮಧ್ಯೆ ಅವರು ರಾಷ್ಟ್ರೀಯ ಟಿ20 ಟ್ರೋಫಿ ಟೂರ್ನಿಯಲ್ಲಿ ರೈಲ್ವೇಸ್ ಪರ ಕಣಕ್ಕಿಳಿಯಲಿದ್ದಾರೆ.

ಇದೇ 18ರಂದು ಟಿ20 ಟೂರ್ನಿ ಆರಂಭವಾಗಲಿದ್ದು, ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಮಿಥಾಲಿ ಕಾಣಿಸಿಕೊಳ್ಳಲಿದ್ದಾರೆ.

ಕಳೆದ ತಿಂಗಳು ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್‌ ಎದುರು ಸೋಲುವ ಮೂಲಕ ಭಾರತ ಟೂರ್ನಿಯಿಂದ ಹೊರಬಿದ್ದಿತ್ತು. ಅಂದಿನಿಂದ ಮಿಥಾಲಿ ಹಾಗೂ ವೇಗದ ಬೌಲರ್ ಜೂಲನ್ ಗೋಸ್ವಾಮಿ ಅವರ ಕ್ರಿಕೆಟ್‌ ಭವಿಷ್ಯದ ಕುರಿತು ಚರ್ಚೆಗಳು ನಡೆಯುತ್ತಿವೆ. ಇಬ್ಬರಿಗೂ ಈಗ 39 ವರ್ಷ ವಯಸ್ಸು.

ಜೂಲನ್ ಈಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

‘ಕಿರಿಯ ಆಟಗಾರ್ತಿಯರಿಗೆ ಮಾರ್ಗದರ್ಶನ ಮಾಡಲು ಮಿಥಾಲಿ ಅವರು ಆಟದ ಅಂಗಣಕ್ಕಿಳಿಯಲಿದ್ದಾರೆ. ಅನುಭವಿ ಆಟಗಾರ್ತಿಯಾಗಿ ತಮ್ಮ ಪಾತ್ರವೇನು ಎಂಬುದರ ಅರಿವು ಅವರಿಗೆ ಇದೆ. ಅಂತರರಾಷ್ಟ್ರೀಯ ಪಂದ್ಯಗಳು ಇಲ್ಲದಿರುವಾಗ ದೇಶಿ ಪಂದ್ಯಗಳಲ್ಲಿ ಯಾವಾಗಲೂ ಅವರು ಆಡುತ್ತಾರೆ‘ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು