ಮುಂಬೈ: ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಬಿಸಿಸಿಐನ ಸರ್ವಸದಸ್ಯರ ಸಭೆಯಲ್ಲಿ (ಎಜಿಎಂ) 45 ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಮಿಥುನ್ ಅವರು 1997–98ರಿಂದ 2016–17ರವರೆಗೆ 157 ಪ್ರಥಮ ದರ್ಜೆ, 130 ಲಿಸ್ಟ್ ಎ ಮತ್ತು 55 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದರು.

ಮಿಥುನ್ ಅವರು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 27 ಶತಕ ಸಹಿತ 9,714 ರನ್ ಗಳಿಸಿದ್ದರು. ಜತೆಗೆ, ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್ ಸಿಡಿಸಿದ್ದರು.

ಈ ಮುಂಚೆ ಬಿಸಿಸಿಐ ಅಧ್ಯಕ್ಷರಾಗಿದ್ದ ರೋಜರ್ ಬಿನ್ನಿ ಅವರ ಅಧಿಕಾರಾವಧಿ ಆಗಸ್ಟ್ನಲ್ಲಿ ಮುಕ್ತಾಯವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.