ಲಖನೌ: ಇಲ್ಲಿ ನಡೆದ ಐಪಿಎಲ್ನ 5ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ವೇಗಿ ಮೊಹಮ್ಮದ್ ಶಮಿ ಅವರು ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ.

ಏಕನಾ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ವಿರುದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 6 ವಿಕೆಟ್ಗಳಿಂದ ಜಯ ಸಾಧಿಸಿದೆ. ಸೋಲಿನ ನಡುವೆಯೂ ಲಖನೌ ತಂಡದ ವೇಗಿ ಮೊಹಮ್ಮದ್ ಶಮಿ ಅವರು ಐಪಿಎಲ್ನಲ್ಲಿ ಈ ವರೆಗೆ ಯಾರೂ ಮಾಡದ ದಾಖಲೆ ಮಾಡಿದ್ದಾರೆ.

ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕರಾಗಿ ಕಣ್ಕಕಿಳಿದ ಕೆ.ಎಲ್ ರಾಹುಲ್ ಅವರನ್ನು ಶಮಿ ಅವರು ಗೋಲ್ಡನ್ ಡಕ್ ಮಾಡಿದ್ದಾರೆ. ಇನ್ನಿಂಗ್ಸ್ ಆರಂಭದ ಮೊದಲ ಎಸೆತದಲ್ಲಿಯೇ ರಾಹುಲ್ ಅವರ ವಿಕೆಟ್ ಕಬಳಿಸಿದ್ದಾರೆ. ಈ ವಿಕೆಟ್ ಪಡೆಯುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಇನ್ನಿಂಗ್ಸ್ನ ಮೊದಲ ಓವರ್ನ ಮೊದಲ ಎಸೆತದಲ್ಲಿ 5 ಬಾರಿ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಯನ್ನು ಶಮಿ ತಮ್ಮದಾಗಿಸಿಕೊಂಡಿದ್ದಾರೆ.

ಶಮಿ ಅವರು ಈ ಹಿಂದೆ 4 ಬಾರಿ ತಮ್ಮ ಓವರ್ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ದರು. ಈ ಪಟ್ಟಿಯಲ್ಲಿ ಕೆ.ಎಲ್ ರಾಹುಲ್ ಅವರ ವಿಕೆಟ್ ಎರಡನೇ ಬಾರಿಗೆ ಪಡೆದಿದ್ದಾರೆ. ಜತೆಗೆ ಇನ್ನಿಂಗ್ಸ್ನ ಮೊದಲ ಎಸೆತದಲ್ಲಿ ಒಬ್ಬನೇ ಬ್ಯಾಟರ್ ಅನ್ನು 2 ಬಾರಿ ಔಟ್ ಮಾಡಿದ ಎರಡನೇಯ ಬೌಲರ್ ಆಗಿಯೂ ದಾಖಲೆ ಬರೆದಿದ್ದಾರೆ.

ಈ ಮೊದಲು ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಟಗಾರ ಲಸಿತ್ ಮಾಲಿಂಗ ಅವರು 2 ಬಾರಿ ಮಯಾಂಕ್ ಅಗರವಾಲ್ ಅವರು ಮೊದಲ ಎಸೆತದಲ್ಲಿಯೇ ಔಟ್ ಮಾಡಿದ್ದರು. ಇದೀಗ ಈ ಪಟ್ಟಿಗೆ ಮೊಹಮ್ಮದ್ ಶಮಿ ಸೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.