ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರು ಶಮಿ ದೀರ್ಘ ಸಮಯದಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಇದೀಗ ಅವರ ಪುನಶ್ಚೇತನ ಮತ್ತು ಫಿಟ್‌ನೆಸ್ ಆರೈಕೆಯು ಆರಂಭವಾಗಿದೆ. ಅಕ್ಟೋಬರ್ ತಿಂಗಳಲ್ಲಿ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ (ಅ.11ರಿಂದ) ಮತ್ತು ಬಿಹಾರ (ಅ. 18ರಿಂದ)ವಿರುದ್ಧದ ಪಂದ್ಯಗಳಲ್ಲಿ ಅವರು ಆಡುಬಹುದು. ಇದರೊಂದಿಗೆ ಭಾರತ ಮತ್ತು ನ್ಯೂಜಿಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿ ಆಡಲು ಸಿದ್ಧವಾಗುವ ನಿರೀಕ್ಷೆ ಇದೆ.