ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದ. ಆಫ್ರಿಕಾದ ಮಾರ್ನೆ ಮಾರ್ಕೆಲ್‌ ಭಾರತ ಕ್ರಿಕೆಟ್ ತಂಡದ ನೂತನ ಬೌಲಿಂಗ್ ಕೋಚ್

Published : 14 ಆಗಸ್ಟ್ 2024, 11:03 IST
Last Updated : 14 ಆಗಸ್ಟ್ 2024, 11:03 IST
ಫಾಲೋ ಮಾಡಿ
Comments

ನವದೆಹಲಿ: ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ಅವರನ್ನು ಭಾರತ ಕ್ರಿಕೆಟ್‌ ತಂಡದ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ.

ಈ ಮಾಹಿತಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಬುಧವಾರ ಖಚಿತಪಡಿಸಿದ್ದಾರೆ. ‘ಹೌದು. ಭಾರತದ ಪುರುಷರ ತಂಡಕ್ಕೆ ಮಾರ್ಕೆಲ್ ಅವರನ್ನು ತರಬೇತುದಾರರನ್ನಾಗಿ ನೇಮಿಸಲಾಗಿದೆ’ ಎಂದಿದ್ದಾರೆ.

39 ವರ್ಷದ ಮಾರ್ಕೆಲ್ ಅವರ ಆಯ್ಕೆಯು ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪ್ರಮುಖ ಆಯ್ಕೆಯಾಗಿತ್ತು. ಇಬ್ಬರೂ ಐಪಿಎಲ್‌ನ ಲಖನೌ ಸೂಪರ್‌ ಜೈಂಟ್ಸ್‌ ತಂಡದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

ಮಾರ್ಕೆಲ್ ಅವರು ಈವರೆಗೂ 86 ಟೆಸ್ಟ್‌, 117 ಏಕದಿನ ಕ್ರಿಕೆಟ್‌ ಹಾಗೂ 44 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 544 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT