ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಡವೊಂದರ ವಿರುದ್ಧ ಸತತ ಹತ್ತು ಅರ್ಧಶತಕ | ಮತ್ತೊಂದು ದಾಖಲೆ ಬರೆದ ಸ್ಮಿತ್

Last Updated 14 ಸೆಪ್ಟೆಂಬರ್ 2019, 10:29 IST
ಅಕ್ಷರ ಗಾತ್ರ

ಲಂಡನ್‌:ಸದ್ಯ ನಡೆಯುತ್ತಿರುವ ಆ್ಯಷಸ್ ಸರಣಿಯಲ್ಲಿ ಅಮೋಘ ಪ್ರದರ್ಶನ ಮುಂದುವರಿಸಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್‌ ಸ್ಮಿತ್‌, ಕೊನೆಯ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 80 ರನ್‌ ಗಳಿಸುವ ಮೂಲಕ ಒಂದೇ ತಂಡದ ವಿರುದ್ಧ ಸತತ 10 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್‌ ಗಳಿಸಿದ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾದರು.

ಸ್ಮಿತ್‌ ಇಂಗ್ಲೆಂಡ್‌ ವಿರುದ್ಧ ಆಡಿರುವ ಕಳೆದ ಹತ್ತು ಇನಿಂಗ್ಸ್‌ಗಳಲ್ಲಿ ಕ್ರಮವಾಗಿ239, 76, 10, 83, 144, 142, 92, 211, 82 ರನ್‌ ಗಳಿಸಿದ್ದಾರೆ. ಇದರಲ್ಲಿ ಮೊದಲ ನಾಲ್ಕು ಇನಿಂಗ್ಸ್‌ಗಳು ಅವರು ಚೆಂಡು ವಿರೂಪ ಪ್ರಕರಣದಲ್ಲಿ ಒಂದು ವರ್ಷ ನಿಷೇದ ಶಿಕ್ಷೆ ಅನುಭವಿಸುವುದಕ್ಕೂ ಮೊದಲು 2017 ಹಾಗೂ 2018ರಲ್ಲಿ ಆಡಿದವು.

ಇದಕ್ಕೂಮೊದಲುಈ ದಾಖಲೆ ಪಾಕಿಸ್ತಾನ ತಂಡದ ಮಾಜಿ ನಾಯಕ ಇಂಜುಮಾಮ್‌ ಉಲ್‌ ಹಕ್‌ ಅವರ ಹೆಸರಿನಲ್ಲಿತ್ತು. ಇಂಜುಮಾಮ್‌ ಕೂಡ ಇಂಗ್ಲೆಂಡ್‌ ವಿರುದ್ಧವೇ ಸತತ 9 ಇನಿಂಗ್ಸ್‌ಗಳಲ್ಲಿ 50ಕ್ಕಿಂತ ಹೆಚ್ಚು ರನ್‌ ಗಳಿಸಿದ್ದರು.

ಕೆನ್ನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐದನೇ ಹಾಗೂ ಕೊನೆ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಇಂಗ್ಲೆಂಡ್‌, ಮೊದಲ ಇನಿಂಗ್ಸ್‌ನಲ್ಲಿ 294ರನ್‌ ಗಳಿಸಿ ಆಲೌಟ್‌ ಆಗಿತ್ತು. ಈ ಮೊತ್ತದೆದುರು ಆರಂಭಿಕ ಆಘಾತ ಅನುಭವಿಸಿದ ಆಸ್ಟ್ರೇಲಿಯಾ, ಕೇವಲ 225ರನ್‌ಗಳಿಗೆ ಎಲ್ಲ ವಿಕೆಟ್‌ ಕಳೆದುಕೊಂಡಿತು. ತಂಡವನ್ನು ಅಲ್ಪಮೊತ್ತಕ್ಕೆ ಕುಸಿಯುವ ಆತಂಕದಿಂದ ಪಾರು ಮಾಡಿದ ಸ್ಮಿತ್‌80ರನ್‌ ಗಳಿಸಿ ಕ್ರಿಸ್‌ ವೋಕ್ಸ್‌ಗೆ ವಿಕೆಟ್‌ ಒಪ್ಪಿಸಿದ್ದರು. ಇದು ಸ್ಮಿತ್‌ಈ ಸರಣಿಯ ಇನಿಂಗ್ಸ್‌ವೊಂದರಲ್ಲಿ ಗಳಿಸಿದ ಕನಿಷ್ಠ ಮೊತ್ತ.

69ರನ್‌ ನೀಡಿ ಆರು ವಿಕೆಟ್‌ ಉರುಳಿಸಿದ ಜೋಫ್ರಾ ಆರ್ಚರ್‌ ಇಂಗ್ಲೆಂಡ್‌ಗೆ ಇನಿಂಗ್ಸ್‌ ಮುನ್ನಡೆ ತಂದುಕೊಡುವಲ್ಲಿ ಯಶಸ್ವಿಯಾದರು.

ಎರಡನೇ ಇನಿಂಗ್ಸ್‌ ಆರಂಭಿಸಿರುವ ಇಂಗ್ಲೆಂಡ್‌ ತಂಡ10 ಓವರ್‌ ಮುಕ್ತಾಯಕ್ಕೆ ವಿಕೆಟ್‌ ನಷ್ಟವಿಲ್ಲದೆ 24 ರನ್‌ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT