ಗುರುವಾರ , ಮೇ 26, 2022
23 °C

IPL 2022: 350ನೇ ಟಿ20 ಪಂದ್ಯ; ರೋಹಿತ್ ಸಾಲಿಗೆ ಧೋನಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಟ್ವೆಂಟಿ-20 ಕ್ರಿಕೆಟ್ ಮಾದರಿಯಲ್ಲಿ 350 ಅಥವಾ ಅದಕ್ಕಿಂತಲೂ ಹೆಚ್ಚು ಪಂದ್ಯಗಳನ್ನು ಆಡಿದ ಭಾರತದ ಎರಡನೇ ಆಟಗಾರ ಎಂಬ ಕೀರ್ತಿಗೆ ಮಹೇಂದ್ರ ಸಿಂಗ್ ಧೋನಿ ಭಾಜನರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಧೋನಿ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: 

 

 

ಇದರೊಂದಿಗೆ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆಯಾಗಿ 350ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ವಿಶ್ವದ 19ನೇ ಆಟಗಾರ ಎನಿಸಿದ್ದಾರೆ.

 

ಕಳೆದ ಪಂದ್ಯದಲ್ಲಷ್ಟೇ ಮಹಿ ಟಿ20 ಕ್ರಿಕೆಟ್‌ನಲ್ಲಿ 7,000 ರನ್‌ಗಳ ಸಾಧನೆ ಮಾಡಿದ್ದರು.

ಭಾರತದ ಪರ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿ:
ರೋಹಿತ್ ಶರ್ಮಾ: 372
ಮಹೇಂದ್ರ ಸಿಂಗ್ ಧೋನಿ: 350
ಸುರೇಶ್ ರೈನಾ: 336
ದಿನೇಶ್ ಕಾರ್ತಿಕ್: 329
ವಿರಾಟ್ ಕೊಹ್ಲಿ: 328

ಅಂದ ಹಾಗೆ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಜಾಗತಿಕ ಪಟ್ಟಿಯಲ್ಲಿ ವೆಸ್ಟ್‌ ಇಂಡೀಸ್‌ನ ಕೀರನ್ ಪೊಲಾರ್ಡ್ (583) ಮುನ್ನಡೆಯಲ್ಲಿದ್ದು, ಡ್ವೇನ್ ಬ್ರಾವೊ (524) ಹಾಗೂ ಪಾಕಿಸ್ತಾನದ ಶೋಯೆಬ್ ಮಲಿಕ್ (472) ಕ್ರಮವಾಗಿ ಎರಡು, ಮೂರನೇ ಸ್ಥಾನದಲ್ಲಿದ್ದಾರೆ.

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು