ಶನಿವಾರ, ಅಕ್ಟೋಬರ್ 24, 2020
27 °C

ಧೋನಿಯ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ಬೆದರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಐದು ವರ್ಷದ ಮಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರ ಬೆದರಿಕೆಗಳು ಬಂದಿವೆ.

ಈ ಮೊದಲು ಆಟಗಾರರ ಪತ್ನಿಯರು ಅಥವಾ ಗೆಳತಿಯರಿಗೆ ಟ್ರೋಲ್‌ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗುತ್ತಿತ್ತು. ಆದರೆ, ಈಗ ಧೋನಿಯವರ ಐದು ವರ್ಷದ ಮಗಳಿಗೆ ಬೆದರಿಕೆ ಹಾಕಿದ್ದು ಮೃಗೀಯ ವರ್ತನೆಗಿಂತಲೂ ಕೀಳಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ನಗ್ಮಾ, 'ನಾವೊಂದು ರಾಷ್ಟ್ರವಾಗಿ ಈ ಹಂತಕ್ಕೆ ಬಂದು ತಲುಪಿರುವುದು ತೀರಾ ಅಸಹ್ಯಕರ' ಎಂದು ಟ್ವೀಟ್‌ ಮಾಡಿದ್ದಾರೆ.

'ಇದು ತೀರಾ ತುಚ್ಛ ಬೆಳವಣಿಗೆ. ನಮ್ಮ ದೇಶಕ್ಕೆ ಏನಾಗುತ್ತಿದೆ? ನಾವು ಯಾವ ಕಡೆಗೆ ಸಾಗುತ್ತಿದ್ದೇವೆ' ಎಂದು ಜಯನಗರ ಶಾಸಕಿ ಸೌಮ್ಯ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ.

'ಸಾಮಾಜಿಕ ಮಾಧ್ಯಮಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ ಉದಾಹರಣೆ' ಎಂದು ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಆಕ್ರೋಶ ಹೊರಹಾಕಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು