ಶನಿವಾರ, ಮೇ 15, 2021
22 °C

ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಮೊದಲ ಪಂದ್ಯದಲ್ಲೇ ಧೋನಿಗೆ ₹12 ಲಕ್ಷ ದಂಡ

ಪಿಟಿಐ‌ Updated:

ಅಕ್ಷರ ಗಾತ್ರ : | |

PTI Photo

ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ತಂಡ ಏಳು ವಿಕೆಟ್‌ಗಳ ಅಂತರದಲ್ಲಿ ಸೋಲು ಕಂಡಿತ್ತು.

ಆದರೆ ಇದೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮತ್ತು ಕಡಿಮೆ ಓವರ್‌ರೇಟ್ ಹೊಂದಿರುವುದಕ್ಕೆ ಧೋನಿಗೆ ₹12 ಲಕ್ಷ ದಂಡ ವಿಧಿಸಲಾಗಿದೆ.

ಈ ಕುರಿತು ಐಪಿಎಲ್ ಹೇಳಿಕೆ ಬಿಡುಗಡೆ ಮಾಡಿದ್ದು, ಧೋನಿಯ ಸಿಎಸ್‌ಕೆ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅತ್ಯಂತ ಕಡಿಮೆ ಓವರ್ ರೇಟ್ ಹೊಂದಿತ್ತು. ಹೀಗಾಗಿ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದೆ.

ಪ್ರಸಕ್ತ ಸಾಲಿನ ಐಪಿಎಲ್ ಸೀಸನ್‌ನಲ್ಲಿ ಇದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೊದಲ ತಪ್ಪಾಗಿದ್ದು, ಆರಂಭದ ಪಂದ್ಯದಲ್ಲೇ ಧೋನಿ ದಂಡ ತೆರುವಂತಾಗಿದೆ. ಅಲ್ಲದೆ, ಪಂದ್ಯದಲ್ಲಿ ಡೆಲ್ಲಿ ತಂಡದ ವಿರುದ್ಧ ಸೋತಿರುವುದು ಕೂಡ ಚೆನ್ನೈಗೆ ಹಿನ್ನಡೆಯಾಗಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಚೆನ್ನೈ ನೀಡಿದ್ದ 189 ರನ್‌ಗಳನ್ನು ಬೆನ್ನತ್ತಿ, 7 ವಿಕೆಟ್‌ಗಳ ಗೆಲುವು ಸಾಧಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು