ಚೆನ್ನೈ: ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಮುಂದಿನ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರು ಆಡುವ ಸಾಧ್ಯತೆಯಿದೆ ಎಂದು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ತಂಡದ ನಾಯಕ ಋತುರಾಜ್ ಗಾಯಕವಾಡ್ ಹೇಳಿದ್ದಾರೆ.

ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಿಎಸ್ಕೆ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಟಾಸ್ ವೇಳೆ ಧೋನಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಋತುರಾಜ್ ಗಾಯಕವಾಡ್, ‘ಧೊನಿ ಅವರು ಮೈದಾನಕ್ಕೆ ಆಗಮಿಸಿದ್ದಾರೆ. ಸಂಪೂರ್ಣ ಗುಣಮುಖರಾಗಿಲ್ಲದ ಕಾರಣ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಆದರೆ, ಒಂದು ವೇಳೆ ನಾವು ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಕೊನೆಯ ಪಂದ್ಯದಲ್ಲಿ ಅವರು ಆಡಬಹುದು’ ಎಂದು ಹೇಳಿದ್ದಾರೆ.

ಪಂದ್ಯಕ್ಕೂ ಮುನ್ನ ಧೋನಿ, ಮೈದಾನಕ್ಕೆ ಆಗಮಿಸುತ್ತಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು ಮತ್ತು ಸಿಎಸ್ಕೆಗೆ ಇದು ತವರು ಮೈದಾನದಲ್ಲಿ ಕೊನೆಯ ಪಂದ್ಯವಾಗಿದೆ. ಹಾಗಾಗಿ, ಧೋನಿ ಅವರು ಈ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಎಂದು ಅಭಿಮಾನಿಗಳು ಭಾವಿಸಿದ್ದರು.

ಸಿಎಸ್ಕೆ ತಂಡವು ಲೀಗ್ ಹಂತದ ತನ್ನ ಕೊನೆಯ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದ್ದು, ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಆ ಪಂದ್ಯ ನಡೆಯಲಿದೆ.

ಋತುರಾಜ್ ಗಾಯಕವಾಡ್ ನೇತೃತ್ವದ ಸಿಎಸ್ಕೆ ತಂಡವು ಆಡಿರುವ 12 ಪಂದ್ಯಗಳಲ್ಲಿ 6ರಲ್ಲಿ ಗೆಲುವು ದಾಖಲಿಸಿದ್ದು ಒಟ್ಟು 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಈ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಪ್ಲೇ–ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ.
.IPL 2026| ಬ್ರೆವಿಸ್, ಕಾರ್ತಿಕ್ ಶರ್ಮಾ ಜವಾಬ್ದಾರಿಯುತ ಆಟ: SRHಗೆ 181 ರನ್ ಗುರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.