ವಿಡಿಯೊ: ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಆಚರಣೆಗೆ ಮುಂದಾಳತ್ವ ವಹಿಸಿದ ಧೋನಿ

ದುಬೈ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ 33ನೇ ಹುಟ್ಟುಹಬ್ಬವನ್ನು ಡ್ರೆಸ್ಸಿಂಗ್ ರೂಮ್‌ನಲ್ಲಿ ಕೇಕ್ ಕತ್ತರಿಸಿ ಮೂಲಕ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.
ಈ ಸಂಭ್ರಮಾಚರಣೆಯ ಮುಂದಾಳತ್ವವನ್ನು ಮೆಂಟರ್ ಎಂ.ಎಸ್.ಧೋನಿ ವಹಿಸಿದ್ದು, ವಿಶೇಷವಾಗಿತ್ತು. ಸದ್ಯ ಈ ವಿಡಿಯೊವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.
ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ಸ್ಕಾಟ್ಲೆಂಡ್ ವಿರುದ್ಧ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಭಾರತ ತಂಡವು ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿತು.
ಇದರೊಂದಿಗೆ ಭಾರತವು ಸೆಮಿಫೈನಲ್ ಪ್ರವೇಶದ ಕನಸನ್ನು ಜೀವಂತವಾಗಿರಿಸಿದೆ. ಈಗ ಎಲ್ಲರ ಕಣ್ಣು ಭಾನುವಾರ ನಡೆಯಲಿರುವ ಅಫ್ಗಾನಿಸ್ತಾನ ಹಾಗೂ ನ್ಯೂಜಿಲೆಂಡ್ ಪಂದ್ಯದ ಮೇಲೆ ನೆಟ್ಟಿದೆ.
ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಪತ್ನಿ ಅನುಷ್ಕಾ ಶರ್ಮಾ, ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದರು.
Cake, laughs and a win! 🎂 😂 👏#TeamIndia bring in captain @imVkohli's birthday after their superb victory in Dubai. 👍 👍 #T20WorldCup #INDvSCO pic.twitter.com/6ILrxbzPQP
— BCCI (@BCCI) November 5, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.