ಇಂಡಿಯನ್ ಪ್ರೀಮಿಯರ್ ಲೀಗ್ 2026ರಲ್ಲಿ ಯಾವುದೇ ಪಂದ್ಯ ಆಡದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರು ಲೀಗ್ನಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ತಂಡ ತೊರೆದು ತವರಿಗೆ ಮರಳಿದ್ದಾರೆ.

ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಪ್ರಕಾರ, ಧೋನಿ ಅವರು ತಂಡ ತೊರೆದು ರಾಂಚಿಗೆ ಮರಳಿದ್ದಾರೆ. ಅವರು ಇಂದು (ಗುರುವಾರ) ನಡೆಯಲಿರುವ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲೂ ಸಿಎಸ್ಕೆ ಪರ ಕಣಕ್ಕಿಳಿಯುವುದಿಲ್ಲ.

2026ರ ಐಪಿಎಲ್ ಆವೃತ್ತಿ ಆರಂಭಕ್ಕೂ ಮುನ್ನವೆ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಧೋನಿ, ಈ ಋತುವಿನಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ವರದಿಗಳ ಪ್ರಕಾರ, ಪ್ರಮುಖ ಪಂದ್ಯಕ್ಕೂ ಮುನ್ನ ಧೋನಿ ಅವರು ಸಿಎಸ್ಕೆ ತಂಡದ ಜೊತೆ ಪ್ರಯಾಣಿಸಿಲ್ಲ. ಚೆನ್ನೈ ತಂಡವು ಪ್ಲೇ ಆಫ್ ಪ್ರವೇಶಿಸಬೇಕೆಂದರೆ, ಗುಜರಾತ್ ವಿರುದ್ಧದ ಪಂದ್ಯವನ್ನು ದೊಡ್ಡ ಅಂತರದೊಂದಿಗೆ ಗೆಲ್ಲಬೇಕು. ಮಾತ್ರವಲ್ಲ, ಇತರೆ ತಂಡಗಳ ಫಲಿತಾಂಶವನ್ನು ಅವಲಂಬಿಸಿರಬೇಕು. ಸದ್ಯ, ಸಿಎಸ್ಕೆ ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಮೂರು ತಂಡಗಳು ಪ್ಲೇ ಆಫ್ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿರುವುದರಿಂದ, ಇನ್ನೊಂದು ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಸಿಎಸ್ಕೆ ತಂಡಗಳು ಪೈಪೋಟಿ ನಡೆಸುತ್ತಿವೆ.

ಇನ್ನೂ ಧೋನಿ ಮರಳುವಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಸ್ಕೆ ಬ್ಯಾಟಿಂಗ್ ಕೋಚ್ ಮೈಕೆಲ್ ಹಸ್ಸಿ, ಚೆನ್ನೈ ತಂಡವು ಪ್ಲೇಆಫ್ಗೆ ಅರ್ಹತೆ ಪಡೆದರೆ, ಅನುಭವಿ ಕ್ರಿಕೆಟಿಗ ಧೋನಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

‘ಧೋನಿ ಅವರು ತಂಡದ ಜೊತೆಗೆ ಇಲ್ಲ ಎಂಬುದು ಸ್ಪಷ್ಟ. ಆದರೆ, ನಾವು ಪ್ಲೇ ಆಫ್ಗೆ ಅರ್ಹತೆ ಪಡೆದರೆ, ಅವರು ಖಂಡಿತವಾಗಿಯೂ ಮತ್ತೆ ತಂಡವನ್ನು ಸೇರಿಕೊಳ್ಳುತ್ತಾರೆ. ಅವರಿಗೆ ಸ್ವಲ್ಪ ನೋವು ಇದೆ, ಆದ್ದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಗುಜರಾತ್ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯವಿರುವುದಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.