ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ICC ಚಾಂಪಿಯನ್ಸ್ ಟ್ರೋಫಿ ಗೆದ್ದು ಇಂದಿಗೆ 10 ವರ್ಷ: ಧೋನಿ ನಾಯಕತ್ವಕ್ಕೆ ಮೆಚ್ಚುಗೆ

Published 23 ಜೂನ್ 2023, 5:45 IST
Last Updated 23 ಜೂನ್ 2023, 5:45 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್‌ ತಂಡವು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದು ಇಂದಿಗೆ 10 ವರ್ಷಗಳು ಕಳೆದಿವೆ.

2013ರ ಜೂನ್ 23ರಂದು ಬ್ರಿಟನ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯ ಸಾಧಿಸಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ನೆನಪುಗಳನ್ನು ಮೆಲುಕು ಹಾಕಿರುವ ಕ್ರೀಡಾಭಿಮಾನಿಗಳು ‘ಕೂಲ್ ಕ್ಯಾಪ್ಟನ್’ ಧೋನಿ ನಾಯಕತ್ವದ ಟೀಮ್ ಇಂಡಿಯಾ ಆಟಗಾರರ ಆಟವನ್ನು ಸ್ಮರಿಸಿದ್ದಾರೆ.

ಈ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು.

ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿ 5 ರನ್‌ ಅಂತರದಿಂದ ಸೋಲು ಕಂಡಿತ್ತು.

ಪಂದ್ಯಕ್ಕೆ ಮಳೆ ಅಡಚಣೆಯಾಗಿತ್ತು. ಇದರಿಂದಾಗಿ 6 ತಾಸು ವಿಳಂಬವಾಗಿ ಆರಂಭವಾದ ಪಂದ್ಯವನ್ನು 20 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT