ತಮಿಳು ಚಿತ್ರ ನಿರ್ಮಿಸಲಿರುವ ಧೋನಿ; ಪ್ರಮುಖ ಪಾತ್ರದಲ್ಲಿ ನಯನತಾರಾ?

ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕಪ್ತಾನ ಮಹೇಂದ್ರ ಸಿಂಗ್ ಧೋನಿ ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂದು ಕಾಲಿವುಡ್ ಚಿತ್ರರಂಗದ ಮೂಲಗಳು ತಿಳಿಸಿವೆ.
ಬಲ್ಲ ಮೂಲಗಳ ಪ್ರಕಾರ, ಧೋನಿ ನಿರ್ಮಾಣದ ಚೊಚ್ಚಲ ತಮಿಳು ಚಿತ್ರದಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟಿ ನಯನತಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಕೆ.ಎಲ್.ರಾಹುಲ್ -ಅತಿಯಾ ಶೆಟ್ಟಿ ಮದುವೆ ಬಗ್ಗೆ ಸುನಿಲ್ ಶೆಟ್ಟಿ ಹೇಳಿದ್ದೇನು?
ಈ ನಿಟ್ಟಿನಲ್ಲಿ ಧೋನಿ ಅವರು ಈಗಾಗಲೇ ಮೆಗಾಸ್ಟಾರ್ ರಜನಿಕಾಂತ್ ಆಪ್ತರಲ್ಲಿ ಒಬ್ಬರಾದ ಸಂಜಯ್ ಅವರನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.
ನಯನತಾರಾ ಅವರ ಪತಿ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಅವರು ಧೋನಿ ಕಟ್ಟಾ ಅಭಿಮಾನಿಯಾಗಿದ್ದು, ಈ ಚಿತ್ರದಲ್ಲಿ ಧೋನಿ ಅವರ ಅತಿಥಿ ಪಾತ್ರದಲ್ಲಿ ನಟಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
'ಎಂ.ಎಸ್.ಧೋನಿ - ದಿ ಅನ್‌ಟೋಲ್ಡ್ ಸ್ಟೋರಿ' ತಮಿಳುನಾಡಿನಲ್ಲಿ ಸೂಪರ್ ಹಿಟ್ ಆಗಿತ್ತು. ಐಪಿಎಲ್‌ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.