ಸೋಮವಾರ, ಆಗಸ್ಟ್ 3, 2020
23 °C

ಐಪಿಎಲ್: ಹೆನ್ರಿಕ್ಸ್‌, ಮುಜೀಬ್‌ಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೊಹಾಲಿ: ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡದ ಆಟಗಾರರಾದ ಮೊಯಿಸಸ್‌ ಹೆನ್ರಿಕ್ಸ್‌ ಮತ್ತು ಮುಜೀಬ್‌ ಉರ್‌ ರೆಹಮಾನ್‌ ಅವರು ಗಾಯಗೊಂಡಿದ್ದು, ಎರಡನೇ ಹಂತದ ಐಪಿಎಲ್‌ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಇದೆ.

‘ಮಂಗಳವಾರ ಐ.ಎಸ್‌.ಬಿಂದ್ರಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದ ರಾಜಸ್ಥಾನ್‌ ರಾಯಲ್ಸ್‌ ಎದುರಿನ ಪಂದ್ಯಕ್ಕೂ ಮುನ್ನ ಹೆನ್ರಿಕ್ಸ್‌ ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕ್ಯಾಚ್‌ ಪಡೆಯುವಾಗ ಅವರ ಪಾದಕ್ಕೆ ಗಾಯವಾಗಿದೆ. ರಾಜಸ್ಥಾನ್‌ ಎದುರಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮುಜೀಬ್‌ ಭುಜದ ಗಾಯಕ್ಕೆ ಒಳಗಾಗಿದ್ದಾರೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದು ಸಂಪೂರ್ಣವಾಗಿ ಗುಣಮುಖರಾಗಲು ಇನ್ನಷ್ಟು ಸಮಯ ಬೇಕು’ ಎಂದು ಕಿಂಗ್ಸ್‌ ಇಲೆವನ್‌ ಪಂಜಾಬ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸ್ಟ್ರೇಲಿಯಾದ ಆಲ್‌ರೌಂಡರ್‌ ಮೊಯಿಸಸ್‌ ಈ ಬಾರಿಯ ಐಪಿಎಲ್‌ನಲ್ಲಿ ಒಂದೂ ಪಂದ್ಯ ಆಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು