ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AUS | ಭಾರತ ಬ್ಯಾಟಿಂಗ್: ಮೂರನೇ ಕ್ರಮಾಂಕದಲ್ಲಿ ಕೊಹ್ಲಿ ಬದಲು ರಾಹುಲ್

ಮೂರು ಪಂದ್ಯಗಳ ಏಕದಿನ ಸರಣಿ
Last Updated 14 ಜನವರಿ 2020, 11:49 IST
ಅಕ್ಷರ ಗಾತ್ರ

ಮುಂಬೈ:ಭಾರತ ಎದುರಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಪರಸ್ಪರ ಪ್ರಬಲ ಎದುರಾಳಿಗಳಾಗಿರುವ ಉಭಯ ತಂಡಗಳು ಶುಭಾರಂಭದ ನಿರೀಕ್ಷೆಯಲ್ಲಿವೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ವಿರಾಮ ಪಡೆದಿದ್ದ ಉಪನಾಯಕ ರೋಹಿತ್‌ ಶರ್ಮಾ ಟೀಂ ಇಂಡಿಯಾ ಕೂಡಿಕೊಂಡಿದ್ದಾರೆ. ಶಿಖರ್ ಧವನ್ ಮತ್ತು ಕೆ.ಎಲ್‌.ರಾಹುಲ್ ಇಬ್ಬರಿಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಾಗಿದ್ದು, ರೋಹಿತ್‌ ಜೊತೆ ಶಿಖರ್‌ ಧವನ್‌ ಇನಿಂಗ್ಸ್‌ ಆರಂಭಿಸಿದ್ದಾರೆ.ಹೀಗಾಗಿ ನಾಯಕ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕವನ್ನು ರಾಹುಲ್‌ಗೆ ಬಿಟ್ಟುಕೊಟ್ಟಿದ್ದಾರೆ.

ಸದ್ಯ ಇನಿಂಗ್ಸ್‌ ಆರಂಭಿಸಿರುವ ಭಾರತ 1 ಓವರ್‌ ಮುಕ್ತಾಯಕ್ಕೆ8 ರನ್‌ ಗಳಿಸಿದೆ. ಇನಿಂಗ್ಸ್‌ನ ಮೊದಲ ಎಸೆತವನ್ನೇ ಬೌಂಡರಿಗಟ್ಟಿದ ರೋಹಿತ್‌ (8), ಧವನ್‌ ಕ್ರೀಸ್‌ನಲ್ಲಿದ್ದಾರೆ.

ರೋಹಿತ್‌, ಧವನ್‌, ರಾಹುಲ್‌ ಜೊತೆಗೆಕೊಹ್ಲಿ, ಶ್ರೇಯಸ್‌ ಅಯ್ಯರ್‌ ಭಾರತ ಬ್ಯಾಟಿಂಗ್‌ ಬಲ ಹೆಚ್ಚಿಸಲಿದ್ದಾರೆ.ಬೌಲಿಂಗ್‌ ವಿಭಾಗವನ್ನು ವೇಗಿಗಳಾದ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್‌ ಜೊತೆಗೆ ಸ್ಪಿನ್ನರ್‌ ಕುಲದೀಪ್‌ ಯಾದವ್‌, ರವೀಂದ್ರ ಜಡೇಜಾ ಆಧರಿಸಲಿದ್ದಾರೆ.

ಎದುರಾಳಿ ತಂಡವೂ ಸಮತೋಲನದಿಂದ ಕೂಡಿದೆ.ನಾಯಕ ಆ್ಯರನ್ ಫಿಂಚ್‌,ಡೇವಿಡ್ ವಾರ್ನರ್‌,ಸ್ಟೀವ್ ಸ್ಮಿತ್‌,ಮಾರ್ನಸ್‌ ಲಾಬುಶೇನ್‌ ಅವರನ್ನೊಳಗೊಂಡ ಬ್ಯಾಟಿಂಗ್‌ ಪಡೆ ಭಾರತ ಬೌಲರ್‌ಗಳಿಗೆ ಸವಾಲಾಗಬಲ್ಲರು. ಬೌಲಿಂಗ್‌ನಲ್ಲಿ ಪರಿಣಾಮಕಾರಿಯಾಗಲುಪ್ಯಾಟ್ ಕಮಿನ್ಸ್‌,ಕೇನ್‌ ರಿಚರ್ಡ್ಸನ್‌, ಮಿಷೆಲ್ ಸ್ಟಾರ್ಕ್‌, ಆ್ಯಡಂ ಜಂಪಾ ಸಜ್ಜಾಗಿದ್ದಾರೆ.

ದಾಖಲೆಯ ಸನಿಹ ಕೊಹ್ಲಿ:ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಸನಿಹದಲ್ಲಿದ್ದಾರೆ. ಈ ಪಂದ್ಯದಲ್ಲಿ ಶತಕ ಗಳಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ ತವರು ನೆಲದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ದಾಖಲೆಯನ್ನು ಅವರು ಸರಿಗಟ್ಟಲಿದ್ದಾರೆ.

ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ಭಾರತದಲ್ಲಿ ಒಟ್ಟು 20 ಶತಕಗಳನ್ನು ಗಳಿಸಿದ್ದಾರೆ. ಕೊಹ್ಲಿ ಬಗಲಲ್ಲಿ ಈಗ 19 ಶತಕಗಳು ಇವೆ. ಶ್ರೀಲಂಕಾ ವಿರುದ್ಧದ ಟ್ವೆಂಟಿ–20 ಸರಣಿಯ ಸಂದರ್ಭದಲ್ಲಿ ಕೊಹ್ಲಿ ಮೂರೂ ಮಾದರಿಗಳಲ್ಲಿ ನಾಯಕನಾಗಿ ವೇಗದ 11 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಶ್ರೇಯಸ್ಸಿಗೆ ಪಾತ್ರರಾಗಿದ್ದರು.

ಉಭಯ ತಂಡಗಳ ‘ಆಡುವ ಹನ್ನೊಂದರ ಬಳಗ’:
ಭಾರತ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್‌, ಕೆ.ಎಲ್‌.ರಾಹುಲ್‌, ಶ್ರೇಯಸ್ ಅಯ್ಯರ್‌, ರಿಷಭ್ ಪಂತ್‌ (ವಿಕೆಟ್ ಕೀಪರ್‌), ರವೀಂದ್ರ ಜಡೇಜ, ಕುಲದೀಪ್ ಯಾದವ್‌, ಜಸ್‌ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್‌, ಮೊಹಮ್ಮದ್‌ ಶಮಿ.

ಆಸ್ಟ್ರೇಲಿಯಾ: ಆ್ಯರನ್ ಫಿಂಚ್‌ (ನಾಯಕ), ಡೇವಿಡ್ ವಾರ್ನರ್‌, ಮಾರ್ನಸ್‌ ಲಾಬುಶೇನ್‌, ಸ್ಟೀವ್ ಸ್ಮಿತ್‌, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್‌, ಆ್ಯಷ್ಟನ್ ಅಗರ್‌, ಕೇನ್‌ ರಿಚರ್ಡ್ಸನ್‌, ಮಿಷೆಲ್ ಸ್ಟಾರ್ಕ್‌, ಆ್ಯಷ್ಟನ್ ಟರ್ನರ್‌, ಆ್ಯಡಂ ಜಂಪಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT