ಸೋಮವಾರ, ಸೆಪ್ಟೆಂಬರ್ 26, 2022
22 °C

ಬಾಂಗ್ಲಾದೇಶದ ಮುಶ್ಫೀಕರ್ ರಹೀಂ ಟಿ20 ಕ್ರಿಕೆಟ್‌ಗೆ ವಿದಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ಬಾಂಗ್ಲಾದೇಶ ತಂಡದ ವಿಕೆಟ್‌ ಕೀಪರ್ ಬ್ಯಾಟರ್‌ ಮುಶ್ಫೀಕರ್ ರಹೀಂ ಅವರು ಭಾನುವಾರ ಟಿ20 ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಏಕದಿನ ಮತ್ತು ಟೆಸ್ಟ್ ಮಾದರಿಗಳಿಗೆ ಹೆಚ್ಚು ಗಮನ ನೀಡಲು ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

‘ಅವಕಾಶ ಸಿಕ್ಕರೆ ಫ್ರಾಂಚೈಸ್‌ ಕ್ರಿಕೆಟ್‌‘ನಲ್ಲಿ ಮುಂದುವರಿಯುವುದಾಗಿ 35 ವರ್ಷದ ಮುಶ್ಫೀಕರ್ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ನಡೆಯುತ್ತಿರುವ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡವು ಒಂದೂ ಪಂದ್ಯ ಗೆಲ್ಲದೆ ನಿರ್ಗಮಿಸಿದೆ. ತಂಡದ ಮಾಜಿ ನಾಯಕ ಆಗಿರುವ ಮುಶ್ಫೀಕರ್, 102 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದು, 115.03ರ ಸರಾಸರಿಯಲ್ಲಿ 1500 ರನ್‌ ಗಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು